ಮಣಿಪಾಲ: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದ ಪರಿಣಾಮ ದುರ್ಗಾಂಬ ಖಾಸಗಿ ಬಸ್ ಸುಟ್ಟು ಕರಕಲಾದ ಘಟನೆ ಮಣಿಪಾಲ ಟೈಗರ್ ಸರ್ಕಲ್ ಬಳಿ ಇಂದು ಮುಂಜಾನೆ 4.30ಕ್ಕೆ ನಡೆದಿದೆ.
ದುರ್ಗಾಂಬ ಬಸ್ ಬಳ್ಳಾರಿಯ ಕೊಟ್ಟೂರಿನಿಂದ ಮಣಿಪಾಲಕ್ಕೆ ಬರುತ್ತಿದ್ದು, ಮಣಿಪಾಲದ ಟೈಗರ್ ಸರ್ಕಲ್ ಬಳಿ ಬರುತ್ತಿದ್ದಂತೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬಸ್ಸಿನ ಬೋನೆಟ್‌ಗೆ ಬೆಂಕಿ ಹತ್ತಿದೆ. ಆರಂಭದಲ್ಲಿ ಚಾಲಕನ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ತಕ್ಷಣವೇ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಕೆಳಕ್ಕೆ ಇಳಿಸಲಾಯಿತು.
ಬಸ್‌ನಲ್ಲಿದ್ದ ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು ಬಸ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
0 Comments