ಮೂಡುಬಿದಿರೆ: ರಷ್ಯಾ ದಾಳಿಯಿಂದ ತತ್ತರಿಸಿರುವ ಉಕ್ರೇನ್ ರಾಷ್ಟ್ರವು ಅಕ್ಷರಶಃ ಯುದ್ಧ ಪೀಡಿತ ಪ್ರದೇಶವಾಗಿ ಮಾರ್ಪಾಟ್ಟಿದ್ದು ಇಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತ ಸರಕಾರವು ಮುಂದಾಗಿದ್ದು ಈ ಹಿನ್ನೆಲೆಯಲ್ಲಿ ಅಲ್ಲಿರುವ ಉಡುಪಿ ಜನತೆಯ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತೀಯರಿಗೆ ಉಚಿತ ವಿಮಾನದ ವ್ಯವಸ್ಥೆಯನ್ನೂ ಭಾರತ ಸರಕಾರವು ಮಾಡಿದೆ.
ಸಂಬಂಧಪಟ್ಟವರು ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಛೇರಿ ರಜತಾದ್ರಿ ಮಣಿಪಾಲದಲ್ಲಿ ತೆರೆದಿರುವ ಕಂಟ್ರೋಲ್ ರೂಂ ಸಂಖ್ಯೆ : 1077 ಗೆ ಸಂಪರ್ಕಿಸಬಹುದೆಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾಧಿಕಾರಿಗಳ ಪ್ರಕಟನೆಯನ್ನು ಹಂಚಿಕೊಂಡಿದ್ದಾರೆ.
0 Comments