ಅಂತರ್ ವಿವಿ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್, ಆಳ್ವಾಸ್ ಕ್ರೀಡಾಪಟುಗಳ ದಿಗ್ವಿಜಯ

ಜಾಹೀರಾತು/Advertisment
ಜಾಹೀರಾತು/Advertisment

 

ಮೂಡುಬಿದಿರೆ: ಚೆನ್ನೈ ಎಸ್.ಆರ್.ಎಂ. ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಮುಕ್ತಾಯಗೊಂಡ ಅಖಿಲ ಭಾರತ ಅಂತರ್ ವಿವಿ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ಮಂಗಳೂರು ವಿವಿ 11ನೇ ಬಾರಿ ತನ್ನ ಮುಡಿಗೇರಿಸಿಕೊಂಡಿತು.   

ಮಂಗಳೂರು ವಿವಿಯನ್ನು ಪ್ರತಿನಿಧಿಸಿದ ಎಲ್ಲಾ 10 ಮಂದಿ ಆಟಗಾರರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಉಚಿತ ಶಿಕ್ಷಣ ಯೋಜನೆಯಡಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಾಗಿದ್ದಾರೆ.  ಈ ಚಾಂಪಿಯನ್‌ಶಿಪ್‌ನ್ನು ಮಂಗಳೂರು ವಿವಿಯು ಸತತ 7ನೇ ಬಾರಿ ಜಯಿಸಿದ್ದಲ್ಲದೆ, 17 ಬಾರಿ ಲೀಗ್ ಹಂತಕ್ಕೆ ತಲುಪಿತ್ತು.   ಈ ಕ್ರೀಡಾಪಟುಗಳು ಮುಂದಿನ ವಾರ ಮೂಡಬಿದ್ರೆಯಲ್ಲಿ ನಡೆಯಲಿರುವ 67ನೇ ರಾಷ್ಟ್ರೀಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ.ಮೋಹನ್ ಆಳ್ವ ಶ್ಲಾಘಿಸಿದ್ದಾರೆ

Post a Comment

0 Comments