ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಕರಿಂಜೆ ಗ್ರಾಮದ ಗುತ್ತು ಎಂಬಲ್ಲಿರುವ ಸರಕಾರಿ ಜಾಗದಲ್ಲಿ ವಯಸ್ಸಾದ ಚಿರತೆಯ ಕಳೇಬರ ಭಾನುವಾರ ಮಧ್ಯಾಹ್ನದ ವೇಳೆಗೆ ಪತ್ತೆಯಾಗಿದೆ.
ಸುಮಾರು 8 ವರ್ಷ ಪ್ರಾಯದ ಹೆಣ್ಣು ಚಿರತೆ ಇದಾಗಿದ್ದು ವಯೋಸಹಜದಿಂದಾಗಿ ಕಳೆದ 10 ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಮೂಡುಬಿದಿರೆ ಅರಣ್ಯಾಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಚಿರತೆಯ ಕಳೇಬರವನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ .ಎನ್. ಅವರ ಸಮ್ಮುಖದಲ್ಲಿ ಅರಣ್ಯಾಧಿಕಾರಿಗಳ ಕಛೇರಿಯ ಆವರಣದಲ್ಲಿ ದಫನ ಮಾಡಲಾಯಿತು.
ಈ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿ ಹೇಮಗಿರಿ ಅಂಗಡಿ, ಉಪವಲಯಾರಣ್ಯಾಧಿಕಾರಿಗಳು ಮತ್ತು ಸಿಬಂಧಿ ವರ್ಗದವರು ಉಪಸ್ಥಿತರಿದ್ದರು.
0 Comments