ತುಮಕೂರು: ನಡೆದಾಡುವ ದೇವರೆಂದೇ ಖ್ಯಾತರಾಗಿರುವ ಸಿದ್ದಗಂಗಾ ಮಠದ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ 115ನೇ ಹುಟ್ಟುಹಬ್ಬವು ಇಂದು ಅದ್ಧೂರಿಯಾಗಿ ನೆರವೇರಲಿದೆ.
ಕಾರ್ಯಕ್ರಮಕ್ಕಾಗಿ ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿ ವೇದಿಕೆ ಸಿದ್ಧವಾಗುತ್ತಿದ್ದು, ಬೆಳಗ್ಗೆ 11 ಗಂಟೆಯಿಂದ ಮಠದ ಆವರಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮಕ್ಕೂ ಮೊದಲು ಮಠದ ಆವರಣದಲ್ಲಿ ವಿವಿಧ ಧಾರ್ಮಿಕ ವಿಧಿವಿದಾನಗಳು ನೆರವೇರಲಿದೆ.
ನಡೆದಾಡುವ ಬಸವ ಭಾರತ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಷಾ ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಕುಳಿತುಕೊಳ್ಳಲು ಒಟ್ಟು 10 ಸಾವಿರಕ್ಕೂ ಹೆಚ್ಚು ಆಸನ ವ್ಯವಸ್ಥೆ ಮಾಡಲಾಗಿದೆ. ಸಾವರ್ಜನಿಕರಿಗೆ ಕ್ಯಾತಸಂದ್ರ ಮಾರ್ಗವಾಗಿ ಮಠಕ್ಕೆ ಪ್ರವೇಶಕ್ಕೆ ಅನುವು ಮಾಡಿಕೊಡಲಾಗಿದೆ. ಮಠದ ಹಿಂಬದಿಯ ಗೇಟ್ ನಲ್ಲಿ ವಿಐಪಿಗಳ ಪ್ರವೇಶಕ್ಕೆ ಅನುಮತಿ ಇದೆ.
0 Comments