ಮೂಡುಬಿದಿರೆ :ಬೆಳುವಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಡ್ಡೆಯಂಗಡಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕದ ಏಕರೂಪದ ಬ್ರಾಂಡಿಂಗ್ ಸಹಿತ 20ಲಕ್ಷ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ಶನಿವಾರ ಲೋಕಾರ್ಪಣೆ ಹಾಗೂ ತ್ಯಾಜ್ಯ ವಿಲೇವಾರಿ ಸಂಕಲ್ಪ ಅಭಿಯಾನ ಶನಿವಾರ ನಡೆಯಿತು.
ಶಾಸಕ ಉಮಾನಾಥ ಕೋಟ್ಯಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಮೂಡುಬಿದಿರೆ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿಯ ಮಹಾ ಪರ್ವ ನಡೆಯುತ್ತಿದೆ . ಜನತೆಯ ಮೂಲಭೂತ ಅವಶ್ಯಕತೆಗಳಿಗೆ ನಿರಂತರ ಸ್ಪಂದನೆಯನ್ನು ನೀಡುತ್ತಾ ಜಾತಿ ಧರ್ಮ ಪಕ್ಷಗಳ ಎಲ್ಲೆ ಮೀರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಕಾರ್ಯ ನಡೆಸಲಾಗುತ್ತಿದೆ. ಬೆಳುವಾಯಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಆಗಬೇಕೆಂಬುದು ಹಲವು ವರ್ಷಗಳ ಕನಸು. ಸ್ವಚ್ಚ ಭಾರತದ ಪರಿಕಲ್ಪನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ದೇಶಕ್ಕೆ ನೀಡಿದ್ದಾರೆ . ವೈಯಕ್ತಿಕ ಸ್ವಚ್ಚತೆಯೊಂದಿಗೆ ಪರಿಸರದ ಸ್ವಚ್ಛತೆಗೆ ಪ್ರತಿಯೊಬ್ಬರು ಆದ್ಯತೆ ನೀಡುವಂತೆ ಕರೆ ನೀಡಿದರು.
ಕುಡಿಯವ ನೀರಿಗೆ ಸ್ಪಂದನೆ: ಇಡೀ ರಾಜ್ಯಕ್ಕೇ ಮಾದರಿಯಾಗವಂತಹ ಕುಡಿಯುವ ನೀರಿನ ಯೋಜನೆಯೊಂದನ್ನು ರೂಪಿಸಲಾಗಿದ್ದು ದಿನದ ಇಪ್ಪತ್ತನಾಲ್ಕು ಗಂಟೆಗಳ ಕಾಲವೂ ಕುಡಿಯುವ ನೀರು ಲಭ್ಯವಾಗಿಸುವ ಮಹತ್ವಾಕಾಂಕ್ಷೆಯ ಯೋಜನೆ ರೂಪುಗೊಳ್ಳಲಿದೆ ಎಂದು ಶಾಸಕರು ತಿಳಿಸಿದರು.ಇಲಾಖೆ ಇಲಾಖೆಗಳಿಗೆ ಸುತ್ತಾಡುತ್ತಾ ಸಮಯ ವ್ಯರ್ಥಮಾಡದೆ, ಜನತೆಯ ಸಮಸ್ಯೆಗೆ ಒಂದೇ ಸೂರಿನಡಿ ಪರಿಹಾರ ಸಿಗುವಂತೆ ಮಾಡುವ ಒಂದೇ ಸೂರಿನಡಿ ಎಲ್ಲಾ ಇಲಾಖೆಯನ್ನು ಜೋಡಿಸುವ ಮಿನಿವಿಧಾನಸೌಧವು ಮುಂದಿನ ತಿಂಗಳು ಲೋಕಾರ್ಪಣೆಗೊಳ್ಳಲಿದೆ ಎಂದರು.
ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ,ಮೂಡುಬಿದಿರೆ ತಾಲ್ಲೂಕು ಪಂಚಾಯತ್ ಹಾಗೂ ಬೆಳುವಾಯಿ ಗ್ರಾಮ ಪಂಚಾಯತ್ ಹಯೋಗದಲ್ಲಿ `ಸ್ವಚ್ಚತಾ ಉತ್ಸವ ನಿತ್ಯೋತ್ಸವ ಕಾರ್ಯಕ್ರಮದ ಭಾಗವಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಲ್ಲದೆ ಇದೇ ಸಂದರ್ಭದಲ್ಲಿ ಕಾಯರ್ ಬುರ್‌ಗೆ ಹೋಗುವ ರಸ್ತೆ ಅಭಿವೃದ್ಧಿ, ರಸ್ತೆ ಉದ್ಘಾಟನೆ ಹಾಗೂ ಡಿಜಿಟಲೀಕರಣ ಗ್ರಂಥಾಲಯ, ಸ್ವಚ್ಛತಾ ಅಭಿಯಾನದಡಿ ಘನತಾಜ್ಯ ಸಂಗ್ರಹಣಾ ವಾಹನವನ್ನು ಉದ್ಘಾಟಿಸಲಾಯಿತು.
ಪಂಚಾಯತ್ ಅಧ್ಯಕ್ಷೆ ಸುಶೀಲಾ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ರವೀಂದ್ರ ಪೂಜಾರಿ ,ಸಹಾಯಕ ಕಾರ್ಯಕಾರಿ ಅಭಿಯಂತರ ನರೇಂದ್ರಬಾಬು , ಮೂಡುಬಿದಿರೆ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ರಮೇಶ್ ರಾಥೋಡ್ ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೀಮಾನಾಯಕ್ ವೇದಿಕೆಯಲ್ಲಿದ್ದರು. ಹಾಗೂ ಪಂಚಾಯತ್ ಸದಸ್ಯರು ಈ ಸಂದರ್ಭದಲ್ಲಿದ್ದರು.
ಸ್ವಚ್ಛ ಭಾರತ್ ಮಿಷನ್‌ನ ಸಿಬ್ಬಂದಿ ನವೀನ್ ಕಾರ್ಯಕ್ರಮ ನಿರ್ವಹಿಸಿದ್ದರು.ಇದೇ ಉದ್ಘಾಟಿಸಲಾಯಿತು.
0 Comments