ಗಗನಕ್ಕೇರಿದ ಪೆಟ್ರೋಲ್, ಡೀಸೆಲ್‌ ಬೆಲೆ

ಜಾಹೀರಾತು/Advertisment
ಜಾಹೀರಾತು/Advertisment

 

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗುತ್ತಿದ್ದು, ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಕಂಡಿದೆ.

ಇಂದು  ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್ ಗೆ ತಲಾ 80 ಪೈಸೆ ಹೆಚ್ಚಳವಾಗಿದೆ.

ಕಳೆದ 10 ದಿನಗಳಲ್ಲಿ ಒಟ್ಟು 9 ನೇ ಬಾರಿಗೆ ಇಂಧನ ದರ ಏರಿಕೆಯಾಗಿದೆ. ಈ ಮೂಲಕ ಒಟ್ಟು 6.40 ರೂ. ಹೆಚ್ಚಳ ಮಾಡಲಾಗಿದೆ.

ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಕ್ರಮವಾಗಿ ಪ್ರತಿ ಲೀಟರ್ಗೆ 80 ಪೈಸೆ ಏರಿಕೆಯಾಗಿದ್ದು, ಪೆಟ್ರೋಲ್ ಲೀಟರ್ ಗೆ 101.81 ರೂ. ಇದ್ದರೆ ಡೀಸೆಲ್ ಲೀಟರ್ ಗೆ 93.07 ರೂ. ಗೆ ಮಾರಾಟವಾಗುತ್ತಿದೆ. 

ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ  105.62 ಮತ್ತು ಡೀಸೆಲ್ ಬೆಲೆ ₹ 90.47 ಆಗಿದೆ.  ಮಂಗಳೂರಿನಲ್ಲಿ ಡೀಸೆಲ್ ದರವು 90.51ರೂ. ಆಗಿದ್ದು, ಪೆಟ್ರೋಲ್ 105.65 ಅಷ್ಟಕ್ಕೆ ಏರಿದೆ.

Post a Comment

0 Comments