ಮೂಡುಬಿದಿರೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಮೂಡುಬಿದಿರೆ ಇದರ ವತಿಯಿಂದ ನೆಲ್ಲಿಕಾರು ಗ್ರಾಮ ಪಂಚಾಯತ್‌ನ ಹಳೇ ಪಂಚಾಯತ್ ಕಟ್ಟಡದಲ್ಲಿ ಸಂಜೀವಿನಿ ಒಕ್ಕೂಟದ ಮಹಿಳೆಯರು ಅಂತರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಿದರು.
ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಉಷಾ ಅವರು ಮಾತನಾಡಿ, ಮಹಿಳೆಯರು ಎಲ್ಲಾ ಸಂದರ್ಭದಲ್ಲಿಯೂ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಇಂದಿನ ಹವಾಮಾನ ವೈಪರಿತ್ಯ ಇರುವುದರಿಂದ ಆರೋಗ್ಯವನ್ನು ನಿರ್ಲಕ್ಷಿಸಬಾರದು ಎಂದು ತಿಳಿಸಿದರು.
ಮಹಿಳಾ ದಿನಾಚರಣೆಯ ಅಂಗವಾಗಿ ವಿವಿಧ ಆಟೋಟ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ರಿಹಾನ, ಉಪಾಧ್ಯಕ್ಷರಾದ ಗೀತಾ, ಎಂ.ಬಿ.ಕೆ ಗೀತಾ ಜೈನ್, ಎಲ್.ಸಿ.ಆರ್.ಪಿ ಸುಮಲತಾ, ರಾಜಶ್ರೀ, ಆಶಾಕಾರ್ಯಕರ್ತೆ ಶಾಲಿನಿ, ಅಂಗನವಾಡಿ ಕಾರ್ಯಕರ್ತೆಯರಾದ ಚಿತ್ರಲೇಖ, ಶಾಂತ, ಗುಣವತಿ ಹಾಗೂ ಒಕ್ಕೂಟದ ಸದಸ್ಯಯರು, ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಗುಂಪಿನ ಮಹಿಳೆಯರು ಭಾಗವಹಿಸಿದ್ದರು.


0 Comments