ಯೋಗಿ ಆದಿತ್ಯನಾಥ್ ಯು.ಪಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

ಜಾಹೀರಾತು/Advertisment
ಜಾಹೀರಾತು/Advertisment

 


ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಅವಿರೋಧವಾಗಿ ಆಯ್ಕೆಯಾದ ಯೋಗಿ ಸತತ 2ನೇ ಬಾರಿ ರಾಜ್ಯದ ಚುಕ್ಕಾಣಿ ಹಿಡಿದ ಉತ್ತರಪ್ರದೇಶದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಸಂಜೆ 4ಕ್ಕೆ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ, ಕೇಶವ್ ಮೌರ್ಯ ಮತ್ತು ಬ್ರಿಜೇಶ್ ಪಾಠಕ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹರಿಯಾಣ ಸಿಎಂ ಎಂಎಲ್ ಖಟ್ಟರ್, ಹಿಮಾಚಲ ಪ್ರದೇಶ ಸಿಎಂ ಜೈರಾಮ್ ಠಾಕೂರ್, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತಿತರ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.

Post a Comment

0 Comments