ಮೂಡುಬಿದಿರೆ: ಭಾರತೀಯ ಜನತಾ ಪಾರ್ಟಿ ಮೂಡುಬಿದಿರೆ ಇವರ ನೇತೃತ್ವದಲ್ಲಿ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆದ ಭಾಜಪ ಟ್ರೋಫಿ ಶಿರ್ತಾಡಿ ಬಿಜೆಪಿ ಫ್ರೆಂಡ್ಸ್ ಪಾಲಾಗಿದೆ. ಬಿಜೆಪಿ ದಕ ಜಿಲ್ಲಾ ಕಾರ್ಯಲಯ ಕಾರ್ಯದರ್ಶಿ ಸುಕೇಶ್ ಶೆಟ್ಟಿ, ಶಿರ್ತಾಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸಂತೋಷ್ ಶೆಟ್ಟಿ, ಪಂಚಾಯತ್ ಸದಸ್ಯ ಸಂತೋಷ್ ಅಂಚನ್ ಮಾಲಕತ್ವದ ತಂಡ ಗೆಲುವು ಪಡೆದಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ., ಉಪಾಧ್ಯಕ್ಷ ಕಸ್ತೂರಿ ಪಂಜ, ಮಂಡಲ ಅಧ್ಯಕ್ಷ ಸುನಿಲ್ ಆಳ್ವ, ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಮತ್ತಿತರರು ಟ್ರೋಫಿ ವಿತರಿಸಿದರು. ಬಹುಮಾನ ಟ್ರೋಫಿ ಸಹಿತ 25ಸಾವಿರ ನಗದು ಒಳಗೊಂಡಿದೆ.


0 Comments