ಬೆಂಗಳೂರು: ಕೆ.ಎಸ್ ಈಶ್ವರಪ್ಪ ಒಬಿಸಿ ಮೀಸಲಾತಿಯೊಂದಿಗೆ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಕುರಿತು ಚರ್ಚಿಸಲು ಮಾ.31ರಂದು ಸಭೆ ನಡೆಸಲಾಗುವುದು ಎಂದು ಆರ್. ಡಿ.ಪಿ.ಆರ್ ಸಚಿವ ಕೆ.ಎಸ್.ಈಶ್ವರಪ್ಪ ಮಂಗಳವಾರ ವಿಧಾನ ಪರಿಷತ್‌ಗೆ ತಿಳಿಸಿದರು.
ಪಂಚಾಯಿತಿ ಚುನಾವಣೆ ನಡೆಸಲು ಸರ್ಕಾರ ಯಾವುದೇ ಸಿದ್ಧತೆ ನಡೆಸುತ್ತಿಲ್ಲ ಎಂದು ಜೆಡಿಎಸ್ ಎಂಎಲ್.ಸಿ ಮರಿತಿಬ್ಬೇಗೌಡ ವಿಷಯ ಪ್ರಸ್ತಾಪಿಸಿದಾಗ ಉತ್ತರಿಸಿದ ಈಶ್ವರಪ್ಪ, ಒಬಿಸಿಗೆ ಮೀಸಲಾತಿ ಇಲ್ಲದೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ತಿಳಿಸಿದರು.
ಆದರೆ ಸರ್ಕಾರವು ಒಬಿಸಿಗಳಿಗೆ ಅವಕಾಶ ನೀಡಲು ಬಯಸುತ್ತದೆ. ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಮೀಸಲಾತಿ ನಿಗದಿ ಪಡಿಸಲು ಪಂಚಾಯತ್ ರಾಜ್ ಡಿಲಿಮಿಟೇಶನ್ ಸಮಿತಿಯನ್ನು ರಚಿಸಿದ್ದೇವೆ ಅದು ವರದಿಯನ್ನು ಶೀಘ್ರವಾಗಿ ಸಲ್ಲಿಸುವಂತೆ ತಿಳಿಸಲಾಗಿದೆ ಎಂದು ಹೇಳಿದರು .
ಸಿಎಂ ಬಸವರಾಜ ಬೊಮ್ಮಾಯಿ ಮಾ.31ರಂದು ಎಲ್ಲ ಶಾಸಕರ ಸಭೆ ಕರೆದು ಅವರ ಅಭಿಪ್ರಾಯ ಪಡೆದು ಶೀಘ್ರವೇ ಚುನಾವಣೆ ನಡೆಸಲು ಅನುಕೂಲವಾಗುವಂತೆ ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸುವ ಕುರಿತು ತೀರ್ಮಾನಿಸಿದ್ದಾರೆ ಎಂದು ತಿಳಿಸಿದ್ದಾರೆ.
0 Comments