ಬೆಂಗಳೂರು: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಕಾಯ್ದೆ 2002 ರ ಪ್ರಕಾರ ಹಿಂದೂಯೇತರರು ಹಿಂದೂ ಧಾರ್ಮಿಕ ಸಂಸ್ಥೆಗಳ ಆವರಣ ಮತ್ತು ಸುತ್ತಮುತ್ತ ವ್ಯಾಪಾರ ಮಾಡುವಂತಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಈ ಬಗ್ಗೆ ಮಾತನಾಡಿದ, ಅವರು ಈಗಾಗಲೇ ಕಾನೂನು ಚಾಲ್ತಿಯಲ್ಲಿದ್ದು, ಈ ಬಗ್ಗೆ ಸರಕಾರ ಪರಿಶೀಲನೆ ನಡೆಸಲಿದೆ ಎಂದು ಕರ್ನಾಟಕ ಸರ್ಕಾರ ವಿಧಾನಸಭೆಯಲ್ಲಿ ಹೇಳಿದರು.
ವಿಧಾನಸಭಾ ಶೂನ್ಯವೇಳೆಯಲ್ಲಿ ಪ್ರಶ್ನೆ ಮುಂದಿಟ್ಟ ಕಾಂಗ್ರೆಸ್ ಶಾಸಕರಾದ ಯು.ಟಿ.ಖಾದರ್ ಮತ್ತು ರಿಜ್ವಾನ್ ಅರ್ಷದ್ ಅವರು ಅಸೆಂಬ್ಲಿಯಲ್ಲಿ ಹಿಂದೂಯೇತರರು ಅಂಗಡಿಗಳನ್ನು ಖಾಲಿ ಮಾಡುವಂತೆ ಮತ್ತು ದೇವಾಲಯದ ಹೊರಗೆ ವ್ಯಾಪಾರ ಮಾಡುವುದನ್ನು ನಿಲ್ಲಿಸುವಂತೆ ಧಾರ್ಮಿಕ ಸ್ಥಳಗಳಲ್ಲಿ ಹಂಚಲಾಗುತ್ತಿರುವ ಬ್ಯಾನರ್, ಫೈಯರ್ ಮತ್ತು ಪೋಸ್ಟರ್‌ಗಳ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೆ ಮಾಡದಂತೆ ಕಾನೂನು ಇದೆ ಎಂದು ಸಮರ್ಥಿಸಿಕೊಂಡರು.
0 Comments