ಬೆಂಗಳೂರು: ಇಂದು ರಾಜ್ಯಾದ್ಯಂತ ಎಸ್ಎಸ್ಎಲ್‌ಸಿಪರೀಕ್ಷೆಗಳು ಪ್ರಾರಂಭವಾಗಿದೆ. ಈ ವರ್ಷ, ರಾಜ್ಯದಲ್ಲಿ ಎಸ್ಎಸ್‌ಎಲ್‌ಸಿ ಪರೀಕ್ಷೆಯು ಇಂದಿನಿಂದ ಏಪ್ರಿಲ್ 11 ರ ತನಕ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ 523 ಪ್ರೌಢಶಾಲೆಗಳಿಂದ 29,712 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15,615 ಬಾಲಕರು ಹಾಗೂ 14,097 ಬಾಲಕಿಯರು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
ಪ್ರತಿ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಅನಾರೋಗ್ಯ ಅಥವಾ ಇತರ ಸಮಸ್ಯೆಗಳಿದ್ದಲ್ಲಿ ಎರಡು ವಿಶೇಷ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ. ಪರೀಕ್ಷಾ ಕೇಂದ್ರದಿಂದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಉಡುಪಿಯಲ್ಲಿ 266 ಶಾಲೆಗಳಿಂದ 14,022 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅರ್ಹರಾಗಿದ್ದು
56 ಪರೀಕ್ಷಾ ಕೇಂದ್ರಗಳಿವೆ. 1,200ಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರೂ ಪರೀಕ್ಷೆ ಬರೆಯುತ್ತಿದ್ದಾರೆ. ಯಾವುದೇ ರೀತಿಯ ಗೊಂದಲ, ಅವ್ಯವಸ್ಥೆ ಆಗದಂತೆ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. 14,022 ವಿದ್ಯಾರ್ಥಿಗಳ ಪೈಕಿ 7229 ಬಾಲಕರು ಮತ್ತು 6793 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ.
0 Comments