ಮೂಡುಬಿದಿರೆ: ನೀರ್ಕೆರೆ ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗುತ್ತಿದೆ. ಇಲ್ಲಿ ಮಕ್ಕಳ ಸಂಖ್ಯೆಯೂ ಹೆಚ್ಚು ಇರುವುದರಿಂದ ಮುಂದಿನ ದಿನಗಳಲ್ಲಿ ಪಬ್ಲಿಕ್ ಸ್ಕೂಲ್ ಮಾಡಲು ಯಾವುದೇ ರೀತಿಯ ಅಡ್ಡಿಯಿಲ್ಲ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಅವರು ಗುರುವಾರ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೀರ್ಕೆರೆಯಲ್ಲಿ ನಿರ್ಮಾಣಗೊಂಡಿರುವ ನೂತನ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದರು. ಕಳೆದ ಹನ್ನೊಂದೂವರೆ ವರ್ಷಗಳಿಂದ ಸೇವೆ ಸಲ್ಲಿಸಿ ಇದೀಗ ತನ್ನ ಹುಟ್ಟೂರು ಗುರ್ಮೆಗೆ ವರ್ಗಾವಣೆಗೊಂಡಿರುವ ಶಿಕ್ಷಕಿ ಅಕ್ಷತಾ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಅಧ್ಯಾಪಕ ವೃಂದದವರು ಬಾಗೀನ ನೀಡಿ ಗೌರವಿಸಿದರು.
ಶಾಲೆಗೆ ಲ್ಯಾಪ್ ಟ್ಯಾಪ್ ಒದಗಿಸಿರುವ ದಾನಿ ರಾಬರ್ಟ್ ಮಿನೇಜಸ್ ಹಾಗೂ ವಿವಿಧ ಕೊಡುಗೆಗಳನ್ನು ನೀಡಿರುವ ದಾನಿಗಳನ್ನು ಗೌರವಿಸಲಾಯಿತು. ಶಾಲೆಯ ಅನ್ವೇಷಣೆ ಇಕೋ ಕ್ಲಬ್ ನಲ್ಲಿ ಆಯೋಜಿಸಿದ್ದ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು. ಅನಿಸಿಕೆಗಳನ್ನು ಹಂಚಿಕೊAಡ ಶಿಕ್ಷಕಿ ಅಕ್ಷತಾ ಅವರು ಶಾಲೆಯ ಅಧ್ಯಾಪಕ ವೃಂದ, ಊರಿನ ಜನರು ಸಹಕಾರಕ್ಕೆ ಕೃತಜ್ಞತೆ ಸಲ್ಲಿದರು. ಹಾಗೂ ಮಕ್ಕಳ ಪ್ರೀತಿಯನ್ನು ನೆನಪಿಸಿಕೊಂಡರು.
ಗ್ರಾ.ಪಂ ಅಧ್ಯಕ್ಷೆ ರುಕ್ಮಿಣಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್, ಉಪಾಧ್ಯಕ್ಷೆ ಜಯಲಕ್ಷ್ಮೀ, ಸರಕಾರಿ ಶಿಕ್ಷಕರ ನೌಕರರ ಸಂಘದ ಅಧ್ಯಕ್ಷ ನಾಗೇಶ್, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಪ್ರತಿಮ, ಶಿಕ್ಷಕರ ಸಂಘದ ಅಧ್ಯಕ್ಷ ನಾಗರಾಜ್, ಜಿ.ಪಂ ಮಾಜಿ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ಗ್ರಾ.ಪಂ.ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಈ ಸಂದರ್ಭದಲ್ಲಿದ್ದರು.
ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಯಮುನ ಸ್ವಾಗತಿಸಿದರು. ಸಹ ಶಿಕ್ಷಕರಾದ ಅನಂತ್, ವಿರೇಶ್, ಉಷಾ ಪಿ.ಕೆ ಸನ್ಮಾನಿತರನ್ನು ಪರಿಚಯಿಸಿದರು. ಸಹ ಶಿಕ್ಷಕ ದಿನಕರ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಶೈಲಜಾ ವಂದಿಸಿದರು.
0 Comments