ಬೆಂಗಳೂರು: ಹೈಕೋರ್ಟ್ ತೀರ್ಪನ್ನು ಲೆಕ್ಕಿಸದೆ ಹಿಜಾಬ್ ಧರಿಸಿ ಶಾಲೆಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ತಡೆಹಿಡಿದಿದ್ದು, ಮಾರ್ಚ್ 28 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಪರೀಕ್ಷೆ ಶುರುವಾಗಲಿದ್ದು ಪರೀಕ್ಷೆಗೆ ಸಮವಸ್ತ್ರ ಕಡ್ಡಾಯವೆಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಶಾಲಾ ಸಮವಸ್ತ್ರವನ್ನು ವಿದ್ಯಾರ್ಥಿಗಳು ಕಡ್ಡಾಯವಾಗಿ ಧರಿಸಬೇಕು. ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿ ನಿರ್ಧರಿಸುವ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸತಕ್ಕದ್ದು ಎಂದು ಆದೇಶಿಸಲಾಗಿದೆ.
2022ರ ಎಸ್ಎಸ್ಎಲ್ ಸಿ ಪರೀಕ್ಷೆಯು ಮಾರ್ಚ್ 28 ರಿಂದ ಎಪ್ರಿಲ್ 11ರವರೆಗೆ ನಡೆಯಲಿದೆ.
0 Comments