ಮಂಗಳೂರು : ಖಾಸಗಿ ಶಾಲೆಗಳಲ್ಲಿ ಸಮವಸ್ತ್ರದ ಭಾಗವಾಗಿ ಹಿಜಾಬ್ ಧರಿಸುತ್ತಿರುವ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿಕೊಂಡು ಎಸೆಸೆಲ್ಸಿ ಪರೀಕ್ಷೆ ಬರೆಯಲು ರಾಜ್ಯ ಸರಕಾರ ಅವಕಾಶ ಕಲ್ಪಿಸಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಸಮವಸ್ತ್ರದ ಭಾಗವಾಗಿ ಹಿಜಾಬ್ ಧರಿಸುತ್ತಿರುವ ಖಾಸಗಿ ಶಾಲೆಗಳ ವಿದ್ಯಾರ್ಥಿನಿಯರು ಆಯಾ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಬರೆಯಬಹುದಾಗಿದೆ. ಇದು ಖಾಸಗಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಮಾತ್ರ ಅನ್ವಯವಾಗಲಿದೆ. ಸರಕಾರಿ ಶಾಲೆಗಳ ವಿದ್ಯಾರ್ಥಿನಿ ಯರು ಸರಕಾರ ರೂಪಿಸಿದ ಸಮವಸ್ತ್ರ ಧರಿಸಿ ಪರೀಕ್ಷೆ ಬರೆಯಬಹುದಾಗಿದೆ ಎಂದು ಡಿಸಿ ಸ್ಪಷ್ಟಪಡಿಸಿದ್ದಾರೆ.
ಮಾ.25ರ ರಾಜ್ಯ ಸರಕಾರದ ಆದೇಶದಂತೆ ಪರೀಕ್ಷಾ ಕೇಂದ್ರಗಳಿಗೆ ಸರಕಾರಿ/ಅನುದಾನಿತ ಶಾಲೆಗಳ ವಿದ್ಯಾರ್ಥಿನಿಯರು ಸರಕಾರ ನಿಗದಿಪಡಿಸಿದ ಸಮವಸ್ತ್ರದಲ್ಲಿ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಆಡಳಿತ ಮಂಡಳಿ ನಿಗದಿಪಡಿಸಿದ ಸಮವಸ್ತ್ರವನ್ನು ಧರಿಸಿಕೊಂಡು ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಅವಕಾಶವಿದೆ ಎಂದು ಡಿಸಿ ತಿಳಿಸಿದ್ದಾರೆ.
ಅಲ್ಲದೆ ಹಿಜಾಬ್ ಸಮವಸ್ತ್ರವನ್ನಾಗಿ ಹೊಂದಿರುವ ಶಾಲೆಗಳ ವಿದ್ಯಾರ್ಥಿಗಳು ಯಾವ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲಿದ್ದಾರೆ ಎಂಬ ಮಾಹಿತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪಡೆದು ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಮಾಹಿತಿಯನ್ನು ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಈಗಾಗಲೆ ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸುತ್ತಿರುವ ವಿದ್ಯಾರ್ಥಿನಿಯರು ಶಾಲಾ ಮುಖ್ಯಸ್ಥರ ಸಹಿಯುಳ್ಳ ಪತ್ರವನ್ನು ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ತೋರಿಸಿ ಪರೀಕ್ಷೆ ಬರೆಯಬಹುದಾಗಿದೆ ಎಂದು ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಮೂಸಬ್ಬ ಬ್ಯಾರಿ ತಿಳಿಸಿದ್ದಾರೆ.
ಕೇರಳದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಾಹನಗಳ ವ್ಯವಸ್ಥೆ
ದ.ಕ.ಜಿಲ್ಲೆಯ 99 ಕೇಂದ್ರಗಳಲ್ಲಿ ಮಾ.28ರಿಂದ ಆರಂಭಗೊಳ್ಳಲಿರುವ ಎಸೆಸೆಲ್ಸಿ ಪರೀಕ್ಷೆ ಬರೆಯಲು ಕೇರಳ
ಕೇರಳದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಾಹನಗಳ ವ್ಯವಸ್ಥೆ
ದ.ಕ.ಜಿಲ್ಲೆಯ 99 ಕೇಂದ್ರಗಳಲ್ಲಿ ಮಾ.28ರಿಂದ ಆರಂಭಗೊಳ್ಳಲಿರುವ ಎಸೆಸೆಲ್ಸಿ ಪರೀಕ್ಷೆ ಬರೆಯಲು ಕೇರಳದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎರಡು ವಾಹನಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಎಸೆಸೆಲ್ಸಿ ಪರೀಕ್ಷೆಯ ಹಿನ್ನೆಲೆಯಲ್ಲಿ ರವಿವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಾ.28 ಮತ್ತು 29ರಂದು ಕೇರಳದಲ್ಲಿ ಹರತಾಳವಿದೆ. ಇದರಿಂದ ಕೇರಳದ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ತಲಪಾಡಿಯಲ್ಲಿ ಎರಡು ದಿನ ಎರಡು ವಾಹನಗಳ ವ್ಯವಸ್ಥೆ ಮಾಡಲಾಗಿದೆ ಎಂದರು.
0 Comments