ಶ್ರವಣದೋಷ, ವಿಕಲಚೇತನ, ದೃಷ್ಠಿದೋಷವುಳ್ಳ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯ

 

ಮೂಡುಬಿದಿರೆ : ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಶ್ರವಣದೋಷ, ವಿಕಲಚೇತನ, ದೃಷ್ಠಿದೋಷವುಳ್ಳ ವಿದ್ಯಾರ್ಥಿಗಳಿಗೆ ಹೊಲಿಗೆ ಯಂತ್ರ, ಲ್ಯಾಪ್ಟಾಪ್ ಹಾಗೂ ಬ್ರೈಲ್ಕಿಟ್ ಸೌಲಭ್ಯವನ್ನು ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕನಿಷ್ಠ ಎಸ್.ಎಸ್.ಎಲ್.ಸಿ ವ್ಯಾಸಂಗ ಮಾಡಿರುವ  ಹಾಗೂ ವೃತ್ತಿಗೆ ಸಂಬಂಧಿಸಿದ ಪ್ರಮಾಣ ಪತ್ರ ಹೊಂದಿರುವ ಶೇ.40ಕ್ಕಿಂತ ಹೆಚ್ಚಿನ ಶ್ರವಣದೋಷವುಳ್ಳ ವಿಕಲಚೇತನ ವ್ಯಕ್ತಿಗಳಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಹಾಗೂ ಎಸ್.ಎಸ್.ಎಲ್.ಸಿ ಮತ್ತು ಉನ್ನತ ವ್ಯಾಸಂಗ ಮಾಡುತ್ತಿರುವ ಶೇ.40 ಮತ್ತು ಅದಕ್ಕಿಂತ ಹೆಚ್ಚಿನ ದೃಷ್ಠಿದೋಷವುಳ್ಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಹಾಗೂ ಬ್ರೈಲ್ಕಿಟ್ ಸೌಲಭ್ಯಕ್ಕಾಗಿ ಅರ್ಜಿ  ಹಾಕಬಹುದಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810/811 ಅನ್ನು ಸಂಪರ್ಕಿಸಲು ಸೂಚನೆ ನೀಡಿದೆ.

Post a Comment

0 Comments

Advertisement