ಮೂಡುಬಿದಿರೆ : ಪುತ್ತಿಗೆ ಗ್ರಾಮದ ಸಂಪಿಗೆ ಪ್ರದೇಶದಲ್ಲಿರುವ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪು ಕಲ್ಲು ತೆಗೆದು ಗಣಿಗಾರಿಕೆ ನಡೆಸುತ್ತಿದ್ದ ಜಾಗಕ್ಕೆ ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡು ಸ್ವತ್ತುಗಳನ್ನು ವಶ ಪಡಿಸಿಕೊಂಡ ಘಟನೆ ನಡೆದಿದೆ.
ವಸಂತ ಕೋಟ್ಯಾನ್ ಮತ್ತು ಸ್ಥಳೀಯ ಕೆಲ ಮಂದಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದರು. ಈ ಕುರಿತು ಸ್ಥಳೀಯರೊಬ್ಬರು ಪೊಲೀಸ್ ಮತ್ತು ಗಣಿ ಹಾಗೂ ಕಂದಾಯ ಇಲಾಖೆಗೆ ದೂರು ನೀಡಿದ್ದರು. ದೂರಿನ ಹಿನ್ನಲೆಯಲ್ಲಿ ದಾಳಿ ನಡೆಸಿರುವ ಕಂದಾಯ ಮತ್ತು ಗಣಿ ಅಧಿಕಾರಿಗಳು ಗಣಿಗಾರಿಕೆಗೆ ಬಳಸುತ್ತಿದ್ದ ಮೆಷಿನರಿಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ.
ಗಣಿಗಾರಿಕೆ ನಡೆಸುವ ದುರುದ್ದೇಶದಿಂದಲೇ ಕದೀಮರು ಗುಡ್ಡಕ್ಕೆ ಇತ್ತೀಚೆಗೆ ಬೆಂಕಿ ಹಚ್ಚಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಗುಡ್ಡದ ಮೊದ ಗಿಡಗಂಟಿಗಳನ್ನು ತೆರವುಗೊಳಿಸಲು ಅಪಾಯವನ್ನೂ ಲೆಕ್ಕಿಸದೆ ಗುಡ್ಡಕ್ಕೆ ಬೆಂಕಿ ಹಚ್ಚಿ ಆಕಸ್ಮಿಕ ಬೆಂಕಿ ಅವಘಡ ಎಂದು ಅಂಚಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.
0 Comments