ತಾಲ್ಕಟೋರ ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಲಿರುವ ಪ್ರಧಾನಿ ನರೇಂದ್ರ ಮೋದಿ

ಜಾಹೀರಾತು/Advertisment
ಜಾಹೀರಾತು/Advertisment

 


ನವದೆಹಲಿ : ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉತ್ತರಿಸುವ 'ಪರೀಕ್ಷಾ ಪೆ ಚರ್ಚಾ' ಐದನೆಯ ಆವೃತ್ತಿಯು ಶುಕ್ರವಾರದಂದು ನಡೆಯಲಿದ್ದು, ಮುಂಬರುವ ಪರೀಕ್ಷೆಗಳಲ್ಲಿ ಎದುರಾಗಬಹುದಾದ ಆತಂಕ ಹಾಗೂ ಒತ್ತಡ ನಿಭಾಯಿಸುವ ಬಗೆಗೆ ಚರ್ಚಿಸಲಿದ್ದಾರೆ.

 ನವದೆಹಲಿಯ ತಾಲ್ಕಟೋರ ಕ್ರೀಡಾಂಗಣದಲ್ಲಿ ನಡೆಯುವ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಆಯ್ದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಭಾಗವಹಿಸಲಿದ್ದಾರೆ. ಕರ್ನಾಟಕದಿಂದ ಸುಮಾರು 82 ವಿದ್ಯಾರ್ಥಿಗಳು ಪ್ರಧಾನಮಂತ್ರಿಯವರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಆನ್ಲೈನ್ ಮೂಲಕ ಭಾಗವಹಿಸಿ ಪ್ರಶ್ನೆ ಕೇಳಲು ಆಯ್ಕೆಯಾಗಿದ್ದಾರೆ. ರಾಜಭವನದ ಮೂಲಕ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಈ ವರ್ಷ ಪರೀಕ್ಷೆ ಬರೆಯಲಿರುವ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಸೀಗೋಡು ನವೋದಯ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ವಿದ್ಯಾಲಯದ ಪ್ರಾಚಾರ್ಯರಾದ ಆರ್. ಪ್ರೇಮ್ಕುಮಾರ್ ತಿಳಿಸಿದ್ದಾರೆ. 

ಈ ಸಂವಾದ ಕಾರ್ಯಕ್ರಮಕ್ಕೆ ಚಾಮರಾಜನಗರ ಜಿಲ್ಲೆಯ ಕೇಂದ್ರೀಯ ವಿದ್ಯಾಲಯದ 9ನೇ ತರಗತಿ ವಿದ್ಯಾರ್ಥಿನಿ ಶ್ರೇಯ, ಚಿತ್ರದುರ್ಗ ಜಿಲ್ಲೆಯ ಕಡ್ಲೇಗುದ್ದು ಪ್ರೌಢಶಾಲೆಯ ಮುಖ್ಯಶಿಕ್ಷಕ ಡಾ.ಮಹೇಶ್ ಈ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ.

Post a Comment

0 Comments