ಮೂಡುಬಿದಿರೆ: ರಾಜ್ಯ ಸರ್ಕಾರವು ಕಂದಾಯ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ಮೂಲ ದಾಖಲೆಗಳಾದ ಪಹಣಿ, ಅಟ್ಪಾಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸಲು ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಯನ್ನು ಹಮ್ಮಿಕೊಂಡಿದೆ. ಈ ಯೋಜನೆಯನ್ನು ಮಾರ್ಚ್ ೧೨ ಶನಿವಾರದಂದು ಬೆಳಿಗ್ಗೆ ೧೧ ಗಂಟೆಗೆ ಮುಖ್ಯಮಂತ್ರಿಯವರು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಚಾಲನೆ ನೀಡಲಿದ್ದು, ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ತಾಲೂಕು ಮಟ್ಟದಲ್ಲಿ ಸ್ಥಳೀಯ ಶಾಸಕರು ಏಕಕಾಲದಲ್ಲಿ ಚಾಲನೆ ನೀಡಲಿದ್ದಾರೆ


0 Comments