ಆಳ್ವಾಸ್‌ನ 3 ಮಂದಿ ಕ್ರೀಡಾಪಟುಗಳಿಗೆ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ

ಜಾಹೀರಾತು/Advertisment
ಜಾಹೀರಾತು/Advertisment

ಮೂಡುಬಿದಿರೆ: ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ೩ ಮಂದಿ ಕ್ರೀಡಾಪಟುಗಳಿಗೆ ರಾಜ್ಯ ಸರಕಾರ ಕೊಡಮಾಡಲ್ಪಡುವ ೨೦೨೦ನೇ ಸಾಲಿನ “ಕರ್ನಾಟಕ ಕ್ರೀಡಾರತ್ನ”ಪ್ರಶಸ್ತಿ ದೊರೆತಿದೆ. ಬಾಲ್‌ಬ್ಯಾಡ್ಮಿಂಟನ್‌ನಲ್ಲಿ ಕಿರಣ್‌ಕುಮಾರ್, ಕುಸ್ತಿಯಲ್ಲಿ ಲಕ್ಷ್ಮಿ ರೇಡೇಕರ್ ಹಾಗೂ ಖೋಖೋ ದಲ್ಲಿ ದೀಕ್ಷಾ ಕ್ರೀಡಾರತ್ನ ಪ್ರಶಸ್ತಿಗೆ ಭಾಜನರಾದ ಕ್ರೀಡಾಪಟುಗಳು.


ಕಿರಣ್‌ಕುಮಾರ್:ಪ್ರಸಕ್ತ ಕರ್ನಾಟಕ ರಾಜ್ಯ ತಂಡದ ನಾಯಕರಾಗಿರುವ ಕಿರಣ್ ಒಟ್ಟು ೧೬ ಬಾರಿ ರಾಜ್ಯ ತಂಡವನ್ನು ರಾಷ್ಟ್ರೀಯ ಸೀನಿಯರ್ ಹಾಗೂ ಫೆಡರೇಶನ್‌ಕಪ್ ಚಾಂಪಿಯನ್‌ಶಿಪ್‌ಗಳಲ್ಲಿ ಪ್ರತಿನಿಧಿಸಿದ್ದು ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಒಟ್ಟು ೪ ಬಾರಿಚಿನ್ನ, ೪ ಬಾರಿ ಬೆಳ್ಳಿ ಹಾಗೂ ೮ ಬಾರಿ ಕಂಚಿನ ಪದಕ ಪಡೆದಿರುವರು. ಅಖಿಲ ಭಾರತ ಅಂತರ್ ವಿ.ವಿ ಕೂಟದ ಚಾಂಪಿಯನ್ ತಂಡದ ನಾಯಕರಾಗಿ ಅತ್ಯುತ್ತಮ ಆಟಗಾರ ಪ್ರಶಸ್ತಿ ಪಡೆದಿದ್ದು, ೪ ಬಾರಿ ಮಂಗಳೂರು ವಿ.ವಿಯನ್ನು ಪ್ರತಿನಿಧಿಸಿದ್ದಾರೆ. 

ಲಕ್ಷ್ಮಿ ರೇಡೇಕರ್:ಒಟ್ಟು ೫ ಬಾರಿ ರಾಷ್ಟ್ರೀಯ ಸೀನಿಯರ್ ಹಾಗೂ ಜೂನಿಯರ್ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ ಇವರು ರಾಷ್ಟ್ರೀಯ ಜೂನಿಯರ್ ಕೂಟದಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ. ೨ ಬಾರಿ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ಹಾಗೂ ೧ ಬಾರಿ ಖೇಲೋ ಇಂಡಿಯಾ ಕೂಟದಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ. ೨೦೧೮ರಲ್ಲಿ ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌ನ ನಿಮಿತ್ತ ರಾಷ್ಟ್ರೀಯ ಯ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿದ್ದರು. ೩ ಬಾರಿ ಅಖಿಲ ಭಾರತ ಅಂತರ್ ವಿವಿ ಕುಸ್ತಿಯಲ್ಲಿ ಮಂಗಳೂರು ವಿ.ವಿಯನ್ನು ಪ್ರತಿನಿಧಿಸಿದ್ದರು. 


ದೀಕ್ಷಾ :ಒಟ್ಟು ೮ ಬಾರಿ ರಾಷ್ಟ್ರೀಯ  ಖೋ-ಖೋ ಚಾಂಪಿಯನ್‌ಶಿಪ್‌ನಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿರುವ ಇವರು ೪ ಬಾರಿ ಬೆಳ್ಳಿ ಹಾಗೂ ೪ ಬಾರಿ ಕಂಚಿನ ಪದಕವನ್ನು ಪಡೆದಿರುತ್ತಾರೆ. ೪ ಬಾರಿ ಅಖಿಲ ಭಾರತ ಅಂತರ್ ವಿ.ವಿ ಕೂಟಗಳಲ್ಲಿ ಮಂಗಳೂರು ವಿ.ವಿ.ಯನ್ನು ಪ್ರತಿನಿಧಿಸಿದ್ದು ೧ ಬಾರಿ ಚಿನ್ನ ಹಾಗೂ ೧ ಬಾರಿ ಬೆಳ್ಳಿಯ ಪದಕ ಪಡೆದಿರುತ್ತಾರೆ. ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಆಹ್ವಾನಿತ ಖೋಖೋ ಪಂದ್ಯಾವಳಿಯಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ.


ಪ್ರಶಸ್ತಿ ಪುರಸ್ಕೃತ ೩ ಮಂದಿ ಕ್ರೀಡಾಪಟುಗಳು ಆಳ್ವಾಸ್ ಶಿಕ್ಷಣ ಸಂಸ್ಥೆಯ ಉಚಿತ ಶಿಕ್ಷಣದ ವಿದ್ಯಾರ್ಥಿಗಳಾಗಿದ್ದಾರೆ. ಗ್ರಾಮೀಣ ಕ್ರೀಡೆಗಳಿಗೆ ನಮ್ಮ ಸಂಸ್ಥೆಯಲ್ಲಿ ವಿಶೇಷ ಪ್ರಾಶಸ್ತ್ಯವನ್ನು ನೀಡಲಾಗಿದ್ದು ಈ ಗ್ರಾಮೀಣ ಕ್ರೀಡೆಗಳಲ್ಲಿ ರಾಜ್ಯ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ.

Post a Comment

0 Comments