ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ ಹಿನ್ನೆಲೆ-ಕೇಂದ್ರ ಸರ್ಕಾರದಿಂದ 5ರಾಜ್ಯಗಳಿಗೆ ಪತ್ರ

ಜಾಹೀರಾತು/Advertisment
ಜಾಹೀರಾತು/Advertisment

 


ದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆ ಕೇಂದ್ರ ಸರ್ಕಾರವು ಹರಿಯಾಣ, ಉತ್ತರ ಪ್ರದೇಶ, ದೆಹಲಿ, ಮಿಜೋರಾಂ ಮತ್ತು ಮಹರಾಷ್ಟ್ರ ಸರ್ಕಾರಗಳಿಗೆ ಪತ್ರ ಬರೆದಿದ್ದು, ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ. 

ಟೆಸ್ಟ್, ಟ್ರ್ಯಾಕ್, ಟ್ರೀಟ್‌ಮೆಂಟ್‌, ವ್ಯಾಕ್ಸಿನೇಷನ್ ಹೆಚ್ಚಿಸಿ ಹೆಚ್ಚು ಜನರ ಗುಂಪು ಸೇರದಂತೆ ನಿಗಾವಹಿಸಿ ಮಾಸ್ಕ್‌ ಕಡ್ಡಾಯಗೊಳಿಸುವಂತೆ, ಹಾಗೂ  ಇತರೆ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಸೂಕ್ತ ಚಿಕಿತ್ಸೆ ನೀಡಲು ಸಲಹೆ ನೀಡಿದ್ದಾರೆ.

ಕಳೆದೆರಡು ತಿಂಗಳಿನಿಂದ ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಸತತವಾಗಿ ಇಳಿಕೆ ಕಂಡಿತ್ತು. ಆದರೆ ಇತ್ತೀಚೆಗೆ ಕೆಲ ರಾಜ್ಯಗಳಲ್ಲಿ ಹೆಚ್ಚಾಗುತ್ತಿರುವ ಸೋಂಕಿತ ಸಂಖ್ಯೆ ಹಾಗೂ ಪಾಸಿಟಿವಿಟಿ ದರವನ್ನು ನಿಯಂತ್ರಣಕ್ಕೆ ತರಲು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ.

Post a Comment

0 Comments