ಶಿವಮೊಗ್ಗಶಿವಮೊಗ್ಗ: ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಮೇಲೆ ನಂಬಿಕೆ ಇದೆ. ನನ್ನ ಮನೆದೇವರು ಚೌಡೇಶ್ವರಿಯವರು ನನ್ನ ಕಾಯುತ್ತಾಳೆ ಎಂಬ ಭರವಸೆ ಇದೆ. ನಾಳೆ ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕೆ. ಎಸ್ ಈಶ್ವರಪ್ಪ ಘೋಷಣೆ ಮಾಡಿದರು.
ಈ ಕುರಿತು ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಯಾವುದೇ ತಪ್ಪು ಮಾಡಿಲ್ಲ. ಆ ಬಗ್ಗೆ ತನಿಖೆಯಿಂದ ಎಲ್ಲಾ ಸತ್ಯಾಸತ್ಯತೆ ತಿಳಿದು ಬರಲಿದೆ ಎಂದರು.
ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದಾರೆ. ತನಿಖೆಯಿಂದ ನಾನು ನಿರ್ದೋಷಿ ಎಂಬುದಾಗಿ ಹೊರಬರಲಿದೆ. ನನಗೆ ಮಾಡಿದ ಎಲ್ಲರಿಗೂ ಧನ್ಯವಾದಗಳು. ನಾನು ನಾಳೆ ಸಂಜೆ ಸಿಎಂ ಭೇಟಿಯಾಗಿ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದರು. ಈ ಮೂಲಕ ಕೊನೆಗೂ ಕಮೀಷನ್ ಆರೋಪದಲ್ಲಿ ಸಚಿವ ಈಶ್ವರಪ್ಪ, ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ.
0 Comments