ಉಡುಪಿ: ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣವೆಂದು ಡೆತ್‌ನೋಟ್ ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯ ಶಾಂಭವಿ ಲಾಡ್ಜ್‌ನ ರೂಂ ಒಂದರಲ್ಲಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೂ ಮುನ್ನ ಸಂತೋಷ್ ಪಾಟೀಲ್ ಮಾಧ್ಯಮಗಳಿಗೆ ಸಂದೇಶ ಕಳುಹಿಸಿದ್ದು, ನನ್ನ ಸಾವಿಗೆ ಕೆಎಸ್ ಈಶ್ವರಪ್ಪ ಕಾರಣ. ಅವರಿಗೆ ತಕ್ಕ ಶಿಕ್ಷೆಯಾಗಬೇಕು. ನನ್ನೆಲ್ಲಾ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿದ್ದೇನೆ. ನನ್ನ ಪತ್ನಿ, ಹಾಗೂ ಮಗುವಿಗೆ ಪ್ರಧಾನಿ ಮೋದಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ. ನಾನು ಸ್ನೇಹಿತರನ್ನು ಪ್ರವಾಸಕ್ಕೆಂದು ಕರೆದುಕೊಂಡು ಬಂದಿದ್ದೆ. ಅವರಿಗೂ ನನ್ನ ಸಾವಿಗೂ ಯಾವುದೇ ಸಂಬಂಧವಿಲ್ಲ ಎಂದು ಸಂದೇಶ ಕಳುಹಿಸಿದ್ದಾರೆ.
ಬೆಳಗಾವಿ ಮೂಲದ ಸಂತೋಷ್ ಪಾಟೀಲ್ ಪ್ರವಾಸಕ್ಕೆಂದು ಉಡುಪಿಗೆ ಬಂದಿದ್ದರು. ಡೆತ್‌ನೋಟ್ ಬರೆದಿಟ್ಟಿದ್ದ ಸಂತೋಷ್ ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದರು. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಉಡುಪಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
0 Comments