ಕರಗ ನೃತ್ಯ ಹಿರಿಯ ಕಲಾವಿದ ವೆಂಕಟೇಶ ಬಂಗೇರಗೆ ಜಾನಪದ ಪುರಸ್ಕಾರ ಪ್ರಧಾನ

ಜಾಹೀರಾತು/Advertisment
ಜಾಹೀರಾತು/Advertisment

 

ಮೂಡುಬಿದಿರೆ: ಪುತ್ತಿಗೆ ಗ್ರಾಮದ ಹಂಡೇಲು ಕಾಪಿಕಾಡು ನಿವಾಸಿ, ಕರಗನೃತ್ಯ ಹಿರಿಯ ಕಲಾವಿದ ವೆಂಕಟೇಶ್ ಬಂಗೇರ ಅವರಿಗೆ ಕರ್ನಾಟಕ ಜಾನಪದ ಅಕಾಡೆಮಿಯ ೨೦೨೧ನೇ ಸಾಲಿನ ಗೌರವ ಪುರಸ್ಕಾರ ಪ್ರದಾನ ಮಾಡಲಾಯಿತು. 

ಕರ್ನಾಟಕ ಜಾನಪದ ಅಕಾಡೆಮಿ ಬೆಂಗಳೂರು ಹಾಗೂ ಪ್ರವಾಸೋದ್ಯಮ ಇಲಾಖೆ ಬೆಂಗಳೂರು ಸಹಯೋಗದಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆ ಸಿದ್ಧಿಪ್ರಿಯಾ ಕಲ್ಯಾಣ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಇಲಾಖೆಗಳ ಸಚಿವರು, ಜನಪ್ರತಿನಿಧಿಗಳು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಬಿ.ಮಂಜಮ್ಮ ಜೋಗತಿ ಸಹಿತ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.

Post a Comment

0 Comments