ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿಗೆ ಮೂಡಬಿದ್ರಿ ಜೈನ ಪ್ರೌಢಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳ ಆಯ್ಕೆ


ಜಾಹೀರಾತು/Advertisment
ಜಾಹೀರಾತು/Advertisment

 

ಮೂಡುಬಿದಿರೆ: ದಕ್ಷಿಣ ಕನ್ನಡದ ಜೈನ ಮೈತ್ರಿ ಕೂಟ ನೀಡುವ ಪ್ರತಿಷ್ಠಿತ ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿಗೆ ವಿದ್ವಾಂಸ, ಮೂಡಬಿದ್ರಿ ಜೈನ ಪ್ರೌಢಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳ ಆಯ್ಕೆಯಾಗಿದ್ದಾರೆ. 

ಏ. 15ರಂದು ಸಂಜೆ 4 ಗಂಟೆಗೆ ಬಸವನಗುಡಿಯ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಮೈತ್ರಿ ಕೂಟದ ವಾರ್ಷಿಕೋತ್ಸವದ ವೇಳೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 25 ಸಾವಿರ ರೂ. ನಗದು, ಶಾಲು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶಸ್ತಿ ಪ್ರದಾನ ಮಾಡಲಿದ್ದು, ನರಸಿಂಹರಾಜಪುರ ಜೈನ ಮಠದ ಸ್ವಸ್ತಿ ಶ್ರೀ ಲಕ್ಷ್ಮೀಸೇವಾ ಭಟ್ಟಾರಕ ಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದಾರೆ. ಇದೇ ವೇಳೆ ವಿಜಯಲಕ್ಷ್ಮೀ ಅಭಯಕುಮಾರ್ ಬರೆದಿರುವ ‘ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ ಪುರಸ್ಕೃತರು’ ಎನ್ನುವ ಪುಸ್ತಕವನ್ನು ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ ಬಿಡುಗಡೆ ಮಾಡಲಿದ್ದಾರೆ ಎಂದು ಮೈತ್ರಿ ಕೂಟದ ಅಧ್ಯಕ್ಷ ಡಿ. ಸುರೇಂದ್ರ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0 Comments