ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ: ಸಿಎಂ ಬೊಮ್ಮಾಯಿ

ಜಾಹೀರಾತು/Advertisment
ಜಾಹೀರಾತು/Advertisment

 

ಮಂಗಳೂರು: ಕೆಲವರು ಪರೋಕ್ಷವಾಗಿ ಪ್ರಚೋದನೆ ನೀಡುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಗಮನಿಸಲು ಹೇಳಿದ್ದೇನೆ. ಡಿಜಿಪಿ ನಿನ್ನೆ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ್ದಾರೆ. ಕಾನೂನು ಸುವ್ಯವಸ್ಥೆ ಮತ್ತು ರಕ್ಷಣೆ ಬಗ್ಗೆ ಸೂಚನೆ ನೀಡಿದ್ದಾರೆ. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಮಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮೇಕೆದಾಟು ಪ್ರಾರಂಭಿಸಿದ ತಕ್ಷಣ ಕುಮಾರಸ್ವಾಮಿ ಜಲಯಾತ್ರೆ ಆರಂಭಿಸಿದ್ದಾರೆ. ಇದರ ಬಗ್ಗೆ ನಾನು ಯಾವುದೇ ಹೇಳಿಕೆ ನೀಡುವ ಅಗತ್ಯವಿಲ್ಲ. ಈಶ್ವರಪ್ಪ ವಿರುದ್ದ ಆರೋಪ ಮಾಡಿದವ ನಾಪತ್ತೆಯಾದ ಬಗ್ಗೆ ಮಾಹಿತಿ ಇಲ್ಲ. ಅದರ ಬಗ್ಗೆ ವಿಚಾರಿಸುತ್ತೇನೆ. ಕಾನೂನು ಸುವ್ಯವಸ್ಥೆ ಕಾಪಾಡೋದು ನಮ್ಮ ಕರ್ತವ್ಯ. ಕಾನೂನು ಕೈಗೆತ್ತಿಕೊಂಡರೆ ಕೂಡಲೇ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.

ಇಂದು ಮಂಗಳೂರಿನಲ್ಲಿ ಬಿಜೆಪಿ ವಿಭಾಗೀಯ ಸರಣಿ ಸಭೆ ಹಾಗೂ ಜಿಲ್ಲಾವಾರು ಸಭೆಗಳು ಮತ್ತು ನಾಯಕರ ಸಭೆಗಳಿವೆ. ಚುನಾವಣಾ ತಯಾರಿ ಹಿನ್ನೆಲೆ ವಿಭಾಗ ಮಟ್ಟದ ಸಭೆಗಳನ್ನು ‌ಮಾಡುತ್ತಿದ್ದೇವೆ. ಏ.16 ಮತ್ತು 17 ರಾಜ್ಯ ಕಾರ್ಯಾಕಾರಿಣಿ ಸಭೆ ಮಾಡಿ ಪಕ್ಷದ ಚರ್ಚೆ ಮಾಡುತ್ತೇವೆ ಎಂದರು.

Post a Comment

0 Comments