ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸತತ ನಾಲ್ಕು ಗಂಟೆಗಳ ಕಾಲು ಸುದೀರ್ಘ ಸಭೆ ನಡೆಸಿದರು.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸಚಿವ ಪಿಕೆ ಮಿಶ್ರಾ ಮತ್ತು ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾ ಸೇರಿದಂತೆ ಕೇಂದ್ರ ಸರ್ಕಾರದ ಇತರ ಉನ್ನತ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದು,
24ಕ್ಕೂ ಹೆಚ್ಚು ಕಾರ್ಯದರ್ಶಿಗಳು ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.
2014ರಿಂದೀಚೆಗೆ ಕಾರ್ಯದರ್ಶಿಗಳೊಂದಿಗೆ ಪ್ರಧಾನಿ ಮೋದಿ ಅವರು ನಡೆಸಿದ
ಒಂಭತ್ತನೇ ಸಭೆ ಇದಾಗಿತ್ತು.
ಪ್ರಧಾನಿ ಮೋದಿ ಇದನ್ನೆಲ್ಲ ಗಮನವಿಟ್ಟು ಆಲಿಸಿದ್ದಾರಂತೆ. ಆರ್ಥಿಕವಾಗಿ ಹಿಂದುಳಿದಿರುವ ರಾಜ್ಯಗಳಲ್ಲಿ ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಘೋಷಿಸಲಾದ ಜನಪರ ಯೋಜನೆಯ ಬಗ್ಗೆ ಇಬ್ಬರು ಕಾರ್ಯದರ್ಶಿಗಳು ಉಲ್ಲೇಖಿಸಿದ್ದು, ಈ ಯೋಜನೆ ಆರ್ಥಿಕವಾಗಿ ಸಮರ್ಥನೀಯವಾಗಿಲ್ಲ ಇದು ರಾಜ್ಯಗಳನ್ನು ಶ್ರೀಲಂಕಾದ ದಾರಿಯಲ್ಲಿ ಕೊಂಡೊಯ್ಯಬಹುದು ಎಂದರು. ಹಿಂಜರಿತದ ಮನಸ್ಥಿತಿಯಿಂದ ಹೊರಬರುವಂತೆ ಸಲಹೆ ನೀಡಿದ ಮೋದಿ, ಹೆಚ್ಚುವರಿ ನಿರ್ವಹಣೆಯನ್ನು ನಿಭಾಯಿಸಲು ಹೊಸ ಸವಾಲನ್ನು ಎದುರಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ. ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಯಶಸ್ವಿಯಾಗಿಸುವುದನ್ನು ಬಿಟ್ಟು ಬಡತನದ ನೆಪ ಹೇಳುವಹಳೆಯ ಅಭ್ಯಾಸವನ್ನು ಕೈಬಿಡಿ ಅಂತಾ ಹೇಳಿದ್ದಾರೆ. ಕೋವಿಡ್ ತುರ್ತು ಸಂದರ್ಭದಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಿದ್ದನ್ನು ಮೋದಿ ಉದಾಹರಣೆ ನೀಡಿ
ತಮ್ಮ -ತಮ್ಮ ಇಲಾಖೆಗಳ ಕಾರ್ಯದರ್ಶಿಗಳು ಎಂದುಕೊಳ್ಳಬೇಡಿ. ನೀವೆಲ್ಲರೂ ಭಾರತ ಸರ್ಕಾರದ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸಬೇಕು. ಒಗ್ಗಟ್ಟಿನಲ್ಲಿ ತಂಡವಾಗಿ ಕೆಲಸ ಮಾಡಬೇಕು ಅಂತಾ ಮೋದಿ ಸಲಹೆ ನೀಡಿದರು.
ಆಯಾಯ ಸಚಿವಾಲಯಗಳಿಗೆ ಸಂಬಂಧಿಸಿದ ನೀತಿಗಳಲ್ಲಿರುವ ಲೋಪದೋಷಗಳ ಬಗ್ಗೆ ಪ್ರತಿಕ್ರಿಯೆ ಮತ್ತು ಸಲಹೆಗಳನ್ನು ನೀಡುವಂತೆ ಅವರು ಕಾರ್ಯದರ್ಶಿಗಳಿಗೆ ತಿಳಿಸಿದರು. ಆಡಳಿತದಲ್ಲಿ ಒಟ್ಟಾರೆ ಸುಧಾರಣೆಗಳಿಗೆ ಹೊಸ ಹೊಸ ಆಲೋಚನೆಗಳನ್ನು ಸೂಚಿಸಲು ಪ್ರಧಾನಿ ಮೋದಿ ಕಾರ್ಯದರ್ಶಿಗಳ ಆರು-ವಲಯಗಳ ಗುಂಪುಗಳನ್ನು ಸಹ ರಚಿಸಿದ್ದಾರೆ.
0 Comments