ಉಡುಪಿ: ಪ್ರವಾಸಕ್ಕೆ ಬಂದ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲು

ಜಾಹೀರಾತು/Advertisment
ಜಾಹೀರಾತು/Advertisment

 

ಉಡುಪಿ: ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ಸಮುದ್ರ ಪಾಲಾದ ಘಟನೆ ಉಡುಪಿ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

ಮೃತ ವಿದ್ಯಾರ್ಥಿಗಳನ್ನು ಹಾವೇರಿಯ ಸತೀಶ್ ಎಂ.ನಂದಿಹಳ್ಳಿ ಮತ್ತು ಬಾಗಲಕೋಟೆಯ ಸತೀಶ್ ಎಸ್.ಕಲ್ಯಾಣ್ ಶೆಟ್ಟಿ ಎಂದು ಗುರುತಿಸಲಾಗಿದೆ. ಈಗಾಗಲೇ ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೊರ್ವನ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಇವರು ಬೆಂಗಳೂರಿನ ಯಲಹಂಕ ಜಿ.ಕೆ.ವಿ.ಕೆ. ಕೃಷಿ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳಾಗಿದ್ದು, ಕಾಲೇಜಿನಿಂದ 65 ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಬಂದಿದ್ದರು.

ವಿದ್ಯಾರ್ಥಿಗಳು ಸಮುದ್ರದಲ್ಲಿ ಆಡುತ್ತಿದ್ದ ವೇಳೆ ಇವರಿಬ್ಬರು ಸಮುದ್ರದ ತೆರೆಯ ಹೊಡೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿ ನಾಪತ್ತೆಯಾದರು. ಇವರಿಬ್ಬರ ಪೈಕಿ ಸತೀಶ್ ನಂದಿಹಳ್ಳಿಯನ್ನು ನೀರಿನಿಂದ ಮೇಲಕ್ಕೆ ಎತ್ತಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಆದರೆ ತೀವ್ರವಾಗಿ ಅಸ್ವಸ್ಥಗೊಂಡ ಅವರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಲ್ಪೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Post a Comment

0 Comments