ಮೂಡುಬಿದಿರೆ : ಅಸ್ಪೃಶ್ಯತೆ, ಅಸಮಾನತೆಯ ವಿರುದ್ಧ ಹೋರಾಡಿದವರು ಅಂಬೇಡ್ಕರ್. ಕಾಂಗ್ರೆಸ್ ಅವರ ಹೆಸರನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿತ್ತೇ ಹೊರತು ಅವರ ಹೆಸರನ್ನು ಚಿರಸ್ಥಾಯಿಯಾಗಿದುವ ಶಾಶ್ವತ ಕೆಲಸ ಮಾಡಿಲ್ಲ. ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸಕಾರ ಅಂಬೇಡ್ಕರ್ ಜನ್ಮಸ್ಥಳ ವಾಸಸ್ಥಳವೂ ಸೇರಿದಂತೆ ಐದು ಸ್ಥಳಗಳನ್ನು ಪಂಚತೀರ್ಥ ಹೆಸರಲ್ಲಿ ಅಭಿವೃದ್ಧಿಪಡಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ ಹೇಳಿದರು.
ಬಿಜೆಪಿ ರೈತ ಮೋರ್ಚಾ-ಯುವ ಮೋರ್ಚಾ, ವೆನ್ಲಾಕ್ ಆಸ್ಪತ್ರೆ ಜಂಟಿ ಆಶ್ರಯದಲ್ಲಿ ಅಂಬೇಡ್ಕರ್ ಜಯಂತಿ ಪ್ರಯುಕ್ತ ಸಮಾಜಮಂದಿರದಲ್ಲಿ ನಡೆದ ರಕ್ತದಾನ ಶಿಬಿರ, ಇ-ಶ್ರಮ್‌ಕಾರ್ಡ್, ಆಯುಷ್ಮಾನ್ ಕಾರ್ಡ್ ನೊಂದಣಿ ಕರ‍್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕರ‍್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ಕೇಂದ್ರ ಸರ್ಕಾರವು ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇದನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಅಧಿಕಾರಿಗಳಿಗೆ ಸೀಮಿತಗೊಳಿಸದೆ ಪಕ್ಷದ ಕರ‍್ಯಕರ್ತರೂ ಮುಂದಾಗಬೇಕು. ಆಗ ಮಾತ್ರ ಯೋಜನೆ ಯಶಸ್ಸುಗೊಳ್ಳಲು ಸಾಧ್ಯ ಎಂದರು.
ಮುಖ್ಯ ಅತಿಥಿಗಳಾಗಿ ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್, ಬಿಜೆಪಿ ಮಂಡಲ ಅಧ್ಯಕ್ಷ ಸುನಿಲ್ ಆಳ್ವ, ಯುವಮೋರ್ಚಾ ಅಧ್ಯಕ್ಷ ಅಶ್ವತ್ಥ್ ಪಣಪಿಲ, ರೈತ ಮೋರ್ಚಾ ಅಧ್ಯಕ್ಷ ಸೋಮನಾಥ ಕೋಟ್ಯಾನ್, ಮಂಡಲ ಉಪಾಧ್ಯಕ್ಷ ಲಕ್ಷö್ಮಣ ಪೂಜಾರಿ, ರೈತ ಮೋರ್ಚಾದ ಪ್ರಭಾರಿ ಹರೀಶ್ ಎಂ.ಕೆ., ವೆನ್ಲಾಕ್ ಆಸ್ಪತ್ರೆಯ ವೈದ್ಯ ಡ.ಅನುರುದ್ಧ್, ಬ್ಲಡ್ ಬ್ಯಾಂಕ್ ಮುಖ್ಯಸ್ಥ ಅಂತೋನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ೫೮ ಮಂದಿ ಇ-ಶ್ರಮ ಕಾರ್ಡ್, ೩೯ಮಂದಿ ಆಯುಷ್ಮಾನ್ ಕಾರ್ಡ್ಗೆ ಹೆಸರು ನೊಂದಾಯಿಸಿದರು. ೨೪ ಮಂದಿ ರಕ್ತದಾನ ಮಾಡಿದರು.
0 Comments