ಮೂಡುಬಿದಿರೆ : ನಾಳೆ ಮುಖ್ಯಮಂತ್ರಿಯಿಂದ "ಪತ್ರಿಕಾ ಭವನ"ಕ್ಕೆ ಶಿಲಾನ್ಯಾಸ

ಜಾಹೀರಾತು/Advertisment
ಜಾಹೀರಾತು/Advertisment

 

ಮೂಡುಬಿದಿರೆ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಪ್ರೆಸ್‌ಕ್ಲಬ್ (ರಿ), ಮೂಡುಬಿದಿರೆ ಇದರ ವತಿಯಿಂದ ತಾಲೂಕು ಆಡಳಿತ ಸೌಧದ ಬಳಿ ನಿರ್ಮಾಣಗೊಳ್ಳುತ್ತಿರುವ ನೂತನ ಕಟ್ಟಡ "ಪತ್ರಿಕಾ ಭವನ"ಕ್ಕೆ ನಾಳೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. 

  ಮುಖ್ಯಮಂತ್ರಿಗಳು ಮೂಡುಬಿದಿರೆ ತಾಲೂಕಿನಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ತಾಲೂಕು ಆಡಳಿತ ಸೌಧ ಉದ್ಘಾಟನೆ ಮತ್ತು ವಿವಿಧ ಕಾಮಗಾರಿಗಳ ಶಿಲಾನ್ಯಾಸಕ್ಕಾಗಿ ಮೂಡುಬಿದಿರೆಗೆ ಆಗಮಿಸುವ ಈ ಸಂದರ್ಭದಲ್ಲಿ "ಪತ್ರಿಕಾ ಭವನ"ಕ್ಕೂ ಶಿಲಾನ್ಯಾಸ ನೆರವೇರಿಸಲಿದ್ದಾರೆ. 

ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತು ಮೂಡುಬಿದಿರೆ ಪ್ರೆಸ್‌ಕ್ಲಬ್ ಅಧ್ಯಕ್ಷ ವೇಣುಗೋಪಾಲ್ ಉಪಸ್ಥಿತರಿರುವರು.

Post a Comment

0 Comments