ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಮಧ್ಯಾಹ್ನ ನವದೆಹಲಿಗೆ ತೆರಳಲಿದ್ದು, ಸಚಿವ ಸಂಪುಟ ವಿಸ್ತರಣೆಯ ಕುರಿತು ವರಿಷ್ಠರೊಂದಿಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಸದ್ಯ ಸಿಎಂ ಕೇಂದ್ರ ಜಲ ಶಕ್ತಿ ಸಚಿವರೊಂದಿಗೆ ಸಭೆ ನಡೆಸುತ್ತಿದ್ದು, ಮೇಕೆದಾಟು ಯೋಜನೆಯೂ ಸೇರಿ ರಾಜ್ಯದ ವಿವಿಧ ನೀರಾವರಿ ವಿಚಾರ ಸಂಬಂಧ ಚರ್ಚಿಸುತ್ತಿದ್ದಾರೆ.
ಇನ್ನೂ ಬುಧವಾರವೂ ಕೇಂದ್ರದ ಹಲವು ಸಚಿವರನ್ನ ಸಿಎಂ ಭೇಟಿಯಾಗಲಿದ್ದಾರೆ ಎಂದು ಬಲ್ಲ ಮೂಲಗಳು ಹೇಳಿವೆ.
ಪಕ್ಷದ ವರಿಷ್ಠರನ್ನ ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.
0 Comments