ಮಂಗಳೂರು : ಮಂಗಳೂರು ವಿವಿಯಿಂದ ಈ ಬಾರಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದ್ದು, ಮೂರು ಕ್ಷೇತ್ರದ ಸಾಧಕರನ್ನು ಗುರುತಿಸಿ ಡಾಕ್ಟರೇಟ್ ನೀಡಲಾಗುತ್ತಿದೆ ಎಂದು ಮಂಗಳೂರು ವಿವಿ ಉಪಕುಲಪತಿ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಹೇಳಿದ್ದಾರೆ.
ಶಿಕ್ಷಣ, ಸಾಮಾಜಿಕ ಸೇವೆಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಧರ್ಮಪತ್ನಿ ಹೇಮಾವತಿ ಹೆಗ್ಗಡೆ, ಸಾಮಾಜಿಕ ಸೇವೆ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಹರಿಕೃಷ್ಣ ಪುನರೂರು, ಕಲಾಕ್ಷೇತ್ರದಲ್ಲಿ ಸಿನಿಮಾ ಮತ್ತು ತುಳು ರಂಗಭೂಮಿ ಕಲಾವಿದ ದೇವದಾಸ್ ಕಾಪಿಕಾಡ್ ಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ. ಶನಿವಾರ ಮಂಗಳೂರು ವಿವಿಯ 40ನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪ್ರದಾನ ಮಾಡಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್ ಅಬ್ದುಲ್ ನಜೀರ್ ಸೇರಿ ಮತ್ತಿತರ ಗಣ್ಯರು ಭಾಗಿಯಾಗಲಿದ್ದಾರೆ.
0 Comments