ಹೊಸಪೇಟೆ: ರಾಜ್ಯ ರಾಜಕೀಯದಲ್ಲಿನ ಹೊಸ ಬೆಳೆವಣಿಗೆಯೊಂದರಲ್ಲಿ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಸಕ್ರಿಯ ರಾಜಕೀಯಕ್ಕೆ ಮರಳಲು ಆಸಕ್ತಿ ವ್ಯಕ್ತಪಡಿಸಿದ್ದಾರೆ.
ಅವರು ವಿಜಯನಗರ ಜಿಲ್ಲೆ ಹರಪ್ಪನಹಳ್ಳಿಯಲ್ಲಿ ಭಾನುವಾರ ನಡೆದ ಸೀತಾ ರಾಮ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಜನಾರ್ಧನ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಾಯಕತ್ವದಡಿ ಕೆಲಸ ಮಾಡುವುದಾಗಿ ತಿಳಿಸಿದರು.
ರೆಡ್ಡಿ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಜನಾರ್ಧನ ರೆಡ್ಡಿ ಪಕ್ಷಕ್ಕೆ ಮರಳುವ ಬಗ್ಗೆ ವರಿಷ್ಠರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.ಇದರ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
ಮುಖ್ಯಮಂತ್ರಿ ಬೊಮ್ಮಾಯಿ, ಮಾತನಾಡಿ ಕಾಂಗ್ರೆಸ್ ನ ಕೆಟ್ಟ ಆಡಳಿತವನ್ನು ಜನ ನೋಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಎಲ್ಲ ‘ಭಾಗ್ಯ’ ಯೋಜನೆಗಳು ವಿಧಾನಸೌಧದ ಮೂರನೇ ಮಹಡಿಗೆ ಸೀಮಿತವಾಗಿದ್ದು, ಯಾವುದೂ ಜನರಿಗೆ ತಲುಪಿಲ್ಲ ಎಂದು ಆರೋಪಿಸಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ರೂ.3,000 ಕೋಟಿ ನೀಡುವುದಾಗಿ ಅವರು ಭರವಸೆ ನೀಡಿದರು.
0 Comments