ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನಲ್ಲಿ ಮಹಾವೀರ ಜಯಂತಿ ಆಚರಣೆ

ಜಾಹೀರಾತು/Advertisment
ಜಾಹೀರಾತು/Advertisment

 ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನಲ್ಲಿ ಮಹಾವೀರ ಜಯಂತಿ ಆಚರಣೆ


ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನಲ್ಲಿ ಭಗವಾನ್ ಮಹಾವೀರರ ಜಯಂತಿಯನ್ನು ಆಚರಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಕೆ. ಅಭಯಚಂದ್ರ ಜೈನ್, ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಶೆಟ್ಟಿ, ಪದವಿ ಪೂರ್ವ  ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ. ರಮೇಶ್ ಭಟ್, ಎಸ್‌ಎನ್‌ಎಮ್. ಪಾಲಿಟೆಕ್ನಿಕ್ ಪ್ರಾಂಶುಪಾಲ ಜೆ.ಜೆ.ಪಿಂಟೊ, ಎಂಕೆ ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಧನಂಜಯ ಶೆಟ್ಟಿ, ಎಜಿ ಸೋನ್ಸ್ ಐಟಿಐ ಪ್ರಾಂಶುಪಾಲ ಜಯರಾಮ ಶೆಟ್ಟಿಗಾರ್ ಹಾಗೂ ವಿವಿಧ ಸಂಸ್ಥೆಗಳ ಸಿಬ್ಬಂದಿಯವರ ಉಪಸ್ಥಿತಿಯಲ್ಲಿ ಮೂಡುಬಿದಿರೆಯ ಶ್ರೀ ಜೈನ ಮಠದ ಮುಖ್ಯ ಪುರೋಹಿತ ಪಾರ್ಶ್ವನಾಥ ಇಂದ್ರರವರು ಕಾಲೇಜಿನ ಪ್ರವೇಶ ದ್ವಾರದಲ್ಲಿರುವ ಶ್ರೀ ಮಹಾವೀರ ಸ್ವಾಮಿಯ ಅಮೃತ ಶಿಲೆಯ ಮೂರ್ತಿಗೆ ಹಾಲು, ಶ್ರೀಗಂಧ ದ್ರವ್ಯಗಳಿಂದ ಅಭಿಷೇಕ ಮಾಡಿ ಪೂಜೆಸಲ್ಲಿಸಿ ಪ್ರಾರ್ಥನೆ ಗೈದರು.



Post a Comment

0 Comments