ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಮಂಗಳವಾರ ಬೆಳಿಗ್ಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಿಎಂ ಬಸವರಾಜ್ ಬೊಮ್ಮಾಯಿ, ಸಚಿವ ಹಾಗೂ ಪರಿಷತ್ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಜತೆ ಹೊರಟ್ಟಿ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.
ನಂತರ ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾಗಿದ್ದಾರೆ. ಬಸವರಾಜ ಹೊರಟ್ಟಿಯವರು ಉತ್ತರ ಕರ್ನಾಟಕ ಭಾಗದಲ್ಲಿ ಸರಳ ಸಜ್ಜನಿಕೆಯ ವ್ಯಕ್ತಿತ್ವದಿಂದ ಹೆಸರಾಗಿದ್ದರು. ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಇವರನ್ನು ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಪರಿಷತ್ ಸಭಾಪತಿಯಾಗಿ ನೇಮಿಸಿತ್ತು. ಇದಾದ ಬಳಿಕ ಹೊರಟ್ಟಿಯವರು ಬಿಜೆಪಿ ಸೇರುತ್ತಾರೆ ಎಂಬ ಸಂಶಯ ಇಂದು ನಿಜವಾಗಿದೆ.




0 Comments