ಮೂಡುಬಿದಿರೆ : ಮುಂದಿನ ಜೂನ್ನಲ್ಲಿ ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳು ಖಾಲಿಯಾಗಲಿದ್ದು ಇದಕ್ಕೆ ಕರಾವಳಿ ಭಾಗದಿಂದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೈೂಲಿಯವರ ಹೆಸರನ್ನು ಹೈಕಮಾಂಡ್ಗೆ ಶಿಫಾರಸ್ಸು ಮಾಡಬೇಕು ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಹೇಳಿದರು.
ಅವರು ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರಲ್ಲಿಯೂ ಈ ಕುರಿತು ಚರ್ಚಿಸಲಾಗುವುದು.
ವೀರಪ್ಪ ಮೈೂಲಿ ರಾಜ್ಯ ಕಂಡ ಶ್ರೇಷ್ಠ ರಾಜಕಾರಣಿ. ಅವರು ಮುಖ್ಯಮಂತ್ರಿಯಾಗಿದ್ದಾಗ ಹಲವು ವಿಶ್ವವಿದ್ಯಾಲಯಗಳು, ಅಕಾಡಮಿಗಳನ್ನು ಸ್ಥಾಪಿಸಿದ್ದರು.
ಕೇಂದ್ರ ಸಚಿವರಾಗಿಯೂ ಅತ್ಯುತ್ತಮ ಕೆಲಸಗಳನ್ನು ಮಾಡಿರುವ ಅವರು ರಾಜ್ಯಸಭಾ ಸದಸ್ಯತ್ವಕ್ಕೆ ಅರ್ಹ ವ್ಯಕ್ತಿಯಾಗಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ವಕ್ತಾರ ರಾಜೇಶ್ ಕಡಲಕೆರೆ ಉಪಸ್ಥಿತರಿದ್ದರು.
0 Comments