ಮೂಡುಬಿದಿರೆ: ಭಾರತೀಯ ಜನತಾ ಪಾರ್ಟಿ ಮೂಲ್ಕಿ ಮೂಡುಬಿದಿರೆ ಮಂಡಲ ತಿಂಗಳ ಕಾರ್ಯನಿರ್ವಹಣಾ ತಂಡದ ಸಭೆಯನ್ನು ಶಾಸಕ ಉಮಾನಾಥ್ ಕೋಟ್ಯಾನ್ ಅವರು ಉದ್ಘಾಟಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಕೆಪಿ ಸುಚರಿತ ಶೆಟ್ಟಿ ಮತ್ತು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಸಮಿತಿಗೆ ಕರ್ನಾಟಕ ಸರ್ಕಾರದಿಂದ ನಾಮ ನಿರ್ದೇಶಿತ ಸದಸ್ಯರಾಗಿ ನೇಮಕಗೊಂಡ ಹರೀಶ್ ಮೂಡುಶೆಡ್ಡೆ ಅವರಿಗೆ ಮಂಡಲದ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ, ಮಂಡಲ ಅಧ್ಯಕ್ಷ ಸುನಿಲ್ ಆಳ್ವ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಗಣೇಶ್ ಹೊಸಬೆಟ್ಟು, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ್ ಶೆಟ್ಟಿಗಾರ್, ಕೇಶವ ಕರ್ಕೇರ ಮತ್ತಿತರರು ಉಪಸ್ಥಿತರಿದ್ದರು
0 Comments