ಉಡುಪಿಯಲ್ಲಿ ಬೆಂಗಳೂರಿನ ಜೋಡಿ ಆತ್ಮಹತ್ಯೆ

ಜಾಹೀರಾತು/Advertisment
ಜಾಹೀರಾತು/Advertisment

 

ಮಂದಾರ್ತಿ: ಮಂದಾರ್ತಿ ಹೆಗ್ಗಂಜೆ ಸಮೀಪ ನಿರ್ಜನ ಪ್ರದೇಶದಲ್ಲಿ ಸುಟ್ಟು ಕರಕಲಾದ ಕಾರಿನಲ್ಲಿ ಜೋಡಿಯ ಮೃತದೇಹ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೋಡಿ ಕಾರಿನೊಳಗೆ ಪೆಟ್ರೋಲ್ ಸುರಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ.

ಮೃತರನ್ನು ಬೆಂಗಳೂರು ಆರ್.ಟಿ.ನಗರ ಮೂಲದ ಯಶವಂತ್ ಯಾದವ್ ಹಾಗೂ ಜ್ಯೋತಿ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಈ ಜೋಡಿ ನಿನ್ನೆ ಮಂಗಳೂರಿನ ಮಿಲಾಗ್ರೀಸ್ ಬಳಿ ಇರುವ ಕಾರ್ ಹಬ್‌ನಿಂದ ಕಾರನ್ನು ಬಾಡಿಗೆ ಪಡೆದುಕೊಂಡು ಮಂಗಳೂರಿನ ಬೀಚ್‌ನಲ್ಲಿ ಸುತ್ತಾಡಿದ್ದರು. ನಿನ್ನೆ ಬೆಳಿಗ್ಗೆ ಬೈಕ್ ನಲ್ಲಿ ಬಂದು ಕಾರು ಬಾಡಿಗೆ ಪಡೆದಿದ್ದರು ಎನ್ನಲಾಗಿದ್ದು, ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಜೋಡಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. 

ಇನ್ನು, ಕಳೆದ ಮೂರು ದಿನಗಳ ಹಿಂದೆ ಇವರ ವಿರುದ್ಧ ಬೆಂಗಳೂರಿನಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಇಂದು ಮುಂಜಾನೆ 3.30ರ ಸುಮಾರಿಗೆ ಬೆಂಕಿ ಹೊತ್ತಿ ಉರಿಯುತ್ತಿರುವುದನ್ನು ನೋಡಿದ ಸ್ಥಳಿಯರು ವಿದ್ಯುತ್ ಅವಘಡಡ ಆಗಿರಬಹುದು ಎಂದು ಎದ್ದು ಬಂದು ನೋಡಿದರೆ ಹೊತ್ತಿ ಉರಿಯುವ ಕಾರು ಪ್ರತ್ಯಕ್ಷವಾಗಿದ್ದು, ಅದರಲ್ಲಿ ಜೋಡಿಯ ಮೃತದೇಹ ಪತ್ತೆಯಾಗಿತ್ತು.

Post a Comment

0 Comments