ಗ್ಯಾಸ್ ಸಿಲಿಂಡರ್ ಲಾರಿಯಲ್ಲಿ ಬೆಂಕಿ-ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ


ಜಾಹೀರಾತು/Advertisment
ಜಾಹೀರಾತು/Advertisment

 

ಹೆಜಮಾಡಿ : ಗ್ಯಾಸ್ ಸಿಲಿಂಡರ್ ಇದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಗುರುವಾರ ರಾತ್ರಿ ಹೆಜಮಾಡಿಯಲ್ಲಿ ನಡೆದಿದೆ. ಇದನ್ನು ಕಂಡ ಸ್ಥಳೀಯರು ಸಮಯಪ್ರಜ್ಞೆಯಿಂದ ಬೆಂಕಿಯನ್ನು ನಂದಿಸುವ ಕಾರ್ಯ ಮಾಡಿದ್ದಾರೆ. ಈ ಹಿನ್ನೆಲೆ ನಡೆಯಬೇಕಿದ್ದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಗ್ಯಾಸ್ ಸಿಲಿಂಡರ್ ಇದ್ದ ಲಾರಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ. 

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಪಡುಬಿದ್ರಿ ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Post a Comment

0 Comments