ಉಡುಪಿ: ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡು ಜಿಲ್ಲಾ ಉಪಾಧ್ಯಕ್ಷರಾಗಿದ್ದ ಕಾರ್ಕಳದ ಮುನಿಯಾಲು ಉದಯ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ತಮ್ಮಮುಂದಿನ ನಡೆ ಏನು ಎಂಬುದು ಅವರ ಬೆಂ ಬಲಿಗರಲ್ಲಿ ಕುತೂಹಲ ಮೂಡಿಸಿದ್ದು, ಬಿಜೆಪಿಗೆ ಸೇರ್ಪಡೆಗೊಳ್ಳುತ್ತಾರೆ ಎನ್ನುವ ವಿಚಾರ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
2018ರಲ್ಲಿ ಕಾರ್ಕಳ ಕ್ಷೇತ್ರದಿಂದ ಕಾಂಗ್ರೆಸ್ ಟಿಕೇಟ್ ಗೆ ಪ್ರಬಲ ಆಕಾಂಕ್ಷಿಯಾಗಿದ್ದ ಮುನಿಯಾಲ್ ಗೆ ಕೊನೆಯ ಕ್ಷಣದಲ್ಲಿ ಟಿಕೆಟ್ ಕೈತಪ್ಪಿ ಮಾಜಿ ಶಾಸಕ ಗೋಪಾಲ ಭಂಡಾರಿ ಪಾಲಯಿತು. ಉದಯ ಕುಮಾರ್ ಶೆಟ್ಟಿ ಕಾರ್ಕಳದ ಪ್ರಭಾವಿ ನಾಯಕರಾಗಿದ್ದರು.
0 Comments