ಮೂಡುಬಿದಿರೆ: ಮಂಗಳೂರು ನಗರ ವ್ಯಾಪ್ತಿಯ ಮೂಡಬಿದಿರೆ ನಿವಾಸಿ ಯುವತಿಯೊಬ್ಬಳನ್ನು ಮದುವೆಯಾಗುವ ಅಮಿಷವೊಡ್ಡಿ ಅತ್ಯಾಚಾರ ನಡೆಸಿ ಆಕೆಯಿಂದ ಹಣವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ಮಂಗಳೂರು ಸಿಐಸಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಶಾನ್ ನವಾಸ್, ಪ್ರಾಯ(36), ವಾಸ: ಶಬನಾ ಕಾಟೇಜ್, ಹಿದಾಯತ್ ನಗರ, ತೊಕ್ಕೊಟ್ಟು, ಪೆರ್ಮನ್ನೂರು ಗ್ರಾಮ, ಉಳ್ಳಾಲ, ಮಂಗಳೂರು ಎಂದು ಗುರುತಿಸಲಾಗಿದೆ.
ಮೂಡಬಿದ್ರಿ ನಿವಾಸಿ ಯುವತಿಯೊಬ್ಬಳನ್ನು ನಂಬಿಸಿ ಅತ್ಯಾಚಾರ ನಡೆಸಿ ಹಣ ಸುಲಿಗೆ ಮಾಡಿದ್ದಲ್ಲದೇ ಆಕೆಗೆ ಮಾದಕ ವಸ್ತುಗಳನ್ನು ಬಲವಂತವಾಗಿ ಸೇವಿಸಿ ಆಕೆ ನಗ್ನ ಚಿತ್ರಗಳನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿ ನಂತರ ಹಣ ನೀಡುವಂತೆ ಬೆದರಿಕೆ ಹಾಕಿ ರೂ.1,50,000/- ಸುಲಿಗೆ ಮಾಡಿದ್ದನ್ನು ವರದಿ ಮಾಡಿದೆ.
ಜೊತೆಗೆ ವಿವಿಧ ಕಡೆ ಲಾಡ್ಜ್ ಗಳಿಗೆ ಕರೆದುಕೊಂಡು ಹೋಗಿ ಬಲಾತ್ಕಾರವಾಗಿ ಆರೋಪಿ ಅತ್ಯಾಚಾರ ನಡೆಸಿದ್ದ. ಈ ಬಗ್ಗೆ ಯುವತಿ ನೀಡಿದ ದೂರಿನಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆಯನ್ನು ನಡೆಸುವಂತೆ ಪ್ರಕರಣವನ್ನು ಮಂಗಳೂರು ನಗರ (ಸಿಬಿಸಿ) ವಿಭಾಗಕ್ಕೆ ನೀಡಲಾಗಿದೆ.
ಈ ಪ್ರಕರಣದ ತನಿಖೆಯನ್ನು ಸಿಸಿಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಹಾಗೂ ಸಿಬ್ಬಂದಿಗಳು ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗಾಗಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಆರೋಪಿಯು ನೊಂದ ಯುವತಿಯನ್ನು ನಗರದ ವಿವಿಧ ಲಾಡ್ಜ್‌ಗಳಲ್ಲಿ, ಪುಣೆ, ಮುಂಬೈನ ವಿವಿಧ ಲಾಡ್ಜ್‌ಗಳಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಇದೇ ಆರೋಪಿಯು ಈ ಹಿಂದೆ 2019 ಹಾಗೂ 2020 ರಲ್ಲಿ ಮಂಗಳೂರು ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಮಾದಕ ವಸ್ತು ಮಾರಾಟದ ಪ್ರಕರಣದಲ್ಲಿ ಭಾಗಿಯಾಗಿದ್ದ. ಸದ್ಯ ನೊಂದ ಯುವತಿಯನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ದಾಖಲಿಸಲಾಗಿದೆ, ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ
0 Comments