ಆಳ್ವಾಸ್ ವೈದ್ಯಕೀಯ ಹಾಗೂ ಅರೆವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ


ಜಾಹೀರಾತು/Advertisment
ಜಾಹೀರಾತು/Advertisment

 


ಮೂಡುಬಿದಿರೆ: ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ ಮತ್ತು ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ನ ಸಂಯೋಜನೆಯಲ್ಲಿ ಆಳ್ವಾಸ್ ಸಂಸ್ಥೆಯ ವೈದ್ಯಕೀಯ ಹಾಗೂ ಅರೆವೈದ್ಯಕೀಯ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟವು ಸ್ವರಾಜ್ಯ ಮೈದಾನದಲ್ಲಿ ಶುಕ್ರವಾರ ನಡೆಯಿತು. 

ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಅಶೋಕ್ ಅಡ್ಯಂತಾಯ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ " ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಮುಂದಿನ ಭವಿಷ್ಯದ ಪ್ರಯತ್ನಗಳಲ್ಲಿ ಗೆಲ್ಲುವ ಉತ್ಸಾಹವವನ್ನು ಹುಟ್ಟುಹಾಕುತ್ತದೆ. ವೈದ್ಯಕೀಯ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಶಿಸ್ತು ಹಾಗೂ ಗೆಲ್ಲುವ ಸ್ಫೂರ್ತಿ ಹೆಚ್ಚುತ್ತದೆ ಎಂದರು.

ಕ್ರೀಡಾಕೂಟದ ಪುರುಷರ ವಿಭಾಗದಲ್ಲಿ ಆಳ್ವಾಸ್ ಫಿಸಿಯೋಥೆರಪಿ ಕಾಲೇಜು ಹಾಗೂ ಮಹಿಳೆಯರ ವಿಭಾಗದಲ್ಲಿ ನರ್ಸಿಂಗ್ ಕಾಲೇಜು ಸಮಗ್ರ ಪ್ರಶಸ್ತಿ ಗೆದ್ದುಕೊಂಡವು. ಕ್ರೀಡಾಕೂಟದ ಸಮಗ್ರ ಪ್ರಶಸ್ತಿಯನ್ನು ಆಳ್ವಾಸ್ ಫಿಸಿಯೋಥೆರಫಿ ಕಾಲೇಜು ಗೆದ್ದುಕೊಂಡಿತು.

ಈ ಸಂದರ್ಭ ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ,  ಆಳ್ವಾಸ್‌ನ ವಿವಿಧ ಕಾಲೇಜುಗಳ ಪ್ರಾಚರ‍್ಯರು,ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೇಘನಾ  ಆರ್  ನಾಯಕ್ ಸ್ವಾಗತಿಸಿ   ಉಪನ್ಯಾಸಕಿ ಶೈಲಾ ಮೆಂಡೀಸ್ ವಂದಿಸಿದರು.

Post a Comment

0 Comments