ರಾಜ್ಯದಲ್ಲಿ ಮತ್ತೆ ಹಿಜಾಬ್' ವಿವಾದ : ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಜಾಹೀರಾತು/Advertisment
ಜಾಹೀರಾತು/Advertisment

 

ಮಂಗಳೂರು : ರಾಜ್ಯದಲ್ಲಿ  ಹಿಜಾಬ್ ವಿವಾದ ಮತ್ತೆ ಸದ್ದು ಮಾಡುತ್ತಿದ್ದು ಮಂಗಳೂರಿನ ಯುನಿವರ್ಸಿಟಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಹಾಕಿ ಬಂದಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಮಂಗಳೂರಿನ ಹಂಪನ ಕಟ್ಟೆ ಕಾಲೇಜಿನಲ್ಲಿ ಹಿಜಾಬ್ ಸಂಬಂಧ ಕಾಲೇಜು ಆಡಳಿತ ಮಂಡಳಿ ಕೆಲ ದಿನಗಳ ಹಿಂದೆ ಸಭೆ ನಡೆಸಿತ್ತು. ಸಭೆಯಲ್ಲಿ ಹಿಜಾಬ್ ಧರಿಸದಂತೆ ತೀರ್ಮಾನಿಸಲಾಗಿತ್ತು. ಆದರೆ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದಾರೆ.

 ಕಾಲೇಜಿಗೆ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದ ಹಿನ್ನೆಲೆ ಎಬಿವಿಪಿ ವಿದ್ಯಾರ್ಥಿಗಳು ಹಿಜಾಬ್ ವಿರೋಧಿಸಿ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

Post a Comment

0 Comments