ಶಾಲಾ ಪಠ್ಯ ಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಷಯವನ್ನು ಕಡಿತಗೊಳಿಸಲಾಗಿದೆ ಎಂಬ ವಿರೋಧ ಪಕ್ಷಗಳು ಹಾಗೂ ನಾರಾಯಣ ಗುರುಗಳ ಅನುಯಾಯಿಗಳ ತೀವ್ರ ವಿರೋಧದ ನಡುವೆ ಕೋಟಾ ಶ್ರೀನಿವಾಸ ಪೂಜಾರಿ ಅವರು ಸಮಾಧಾನಕರ ಮಾಹಿತಿಯನ್ನು ನೀಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು "ಯಾವುದೇ ಕಾರಣಕ್ಕೂ ಬೃಹ್ಮಶ್ರೀ ನಾರಾಯಣ ಗುರುಗಳ ವಿಷಯಗಳ ಕುರಿತಾದ ಪಠ್ಯವನ್ನು ಶಾಲಾ ಪಠ್ಯ ಪುಸ್ತಕದಿಂದ ಕೈ ಬಿಡಲಾಗುವುದಿಲ್ಲ" ಎಂದು ಸ್ಪಷ್ಟ ಪಡಿಸಿದರು.
ಬೃಹ್ಮಶ್ರೀ ನಾರಾಯಣ ಗುರುಗಳು ಕೇವಲ ಒಂದು ಸಮಾಜಕ್ಕೆ ಮೀಸಲಾದವರಲ್ಲ. ಅವರ ಚಿಂತನೆಗಳು ಮುಂದಿನ ಪೀಳಿಗೆಯ ಮಕ್ಕಳಿಗೆ ಅನುಕರಣೀಯ. ಯಾವುದೇ ಕಾರಣಕ್ಕೂ ಗುರುಗಳ ವಿಚಾರವನ್ನು ಪಠ್ಯದಿಂದ ಕೈ ಬಿಡುವುದಿಲ್ಲ, ಊಹಾಪೋಹಗಳಿಗೆ ಕಿವಿ ಕೊಡಬೇಡಿ ಎಂದು ಸಚಿವ ಕೋಟ ಮಾಹಿತಿ ನೀಡಿದ್ದಾರೆ.
https://twitter.com/KotasBJP/status/1526919127251619840?s=19
ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲೂ ಮಾಹಿತಿ ಹಂಚಿಕೊಂಡಿದ್ದು ನಾರಾಯಣ ಗುರುಗಳ ಬಗ್ಗೆ ಪಠ್ಯದಿಂದ ಕಡಿತ ಎಂಬ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
0 Comments