ಮೂಡುಬಿದಿರೆಗೆ ಮತ್ತೊಮ್ಮೆ ಸಿಎಂ ಬೊಮ್ಮಾಯಿ ಪ್ರವಾಸ.!ಸಂವಾದಕ್ಕೆ ಸಜ್ಜಾಗಿದೆ ಆಳ್ವಾಸ್ ಕಾಲೇಜು

ಜಾಹೀರಾತು/Advertisment
ಜಾಹೀರಾತು/Advertisment

 

ಮಂಗಳೂರು: ಕಳೆದ ತಿಂಗಳಷ್ಟೇ  ಮೂಡುಬಿದಿರೆಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಜನರ ಗಮನ ಸೆಳೆದಿದ್ದು, ಇದೀಗ ಮತ್ತೆ ಜೂನ್ 1 ರಂದು ಮುಖ್ಯಮಂತ್ರಿಗಳು ಜೈನಕಾಶಿ, ಶಿಕ್ಷಣಕಾಶಿ ಪ್ರಸಿದ್ಧಿಯ ಮೂಡುಬಿದಿರೆಗೆ ಆಗಮಿಸುತ್ತಿದ್ದಾರೆ.

22 ಸಾವಿರ ಫಲಾನುಭವಿಗಳು ಮುಖ್ಯಮಂತ್ರಿ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ಮುಖ್ಯಮಂತ್ರಿ ಅರಳಿದ್ದ ವಿದ್ಯಾ ಯೋಜನೆಯಡಿ ಪ್ರಯೋಜನ ಪಡೆದುಕೊಂಡಿದ್ದಾರೆ.

ವಿದ್ಯಾ ನಿಧಿ ಯೋಜನೆಯಡಿ ಜಿಲ್ಲೆಯ ಫಲಾನುಭವಿಗಳಾಗಿರುವ ರೈತರ ಮಕ್ಕಳೊಡನೆ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂವಾದ ನಡೆಸಲಿದ್ದಾರೆ. 

ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಗ್ರಿ, ಐಟಿಐ, ಡಿಪ್ಲೊಮಾ, ತಾಂತ್ರಿಕ ಶಿಕ್ಷಣ ಸೇರಿದಂತೆ ಇತರ ಕೋರ್ಸ್ ಗಳಲ್ಲಿರುವ ಫಲಾನುಭವಿ ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮಕ್ಕೆ ಆಗಮಿಸಲು ವ್ಯವಸ್ಥೆ ಮಾಡುವಂತೆ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಸೂಚಿಸಿದ್ದಾರೆ. 

ಈ ಬಗ್ಗೆ ಅವರು ಮಂಗಳೂರು ಜಿಪಂ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Post a Comment

0 Comments