ಇನ್ನು ಮೂರು ದಿನಗಳಲ್ಲಿ ಸಂಪುಟ ಪುನಾರಚನೆಯಾಗಲಿದೆ. ಈ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ” ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಂಪುಟ ಪುನಾರಚನೆ ಬಗ್ಗೆ ಮಾತನಾಡಲು ನಾವು ಯಾರು? ಅದನ್ನು ಹೈಕಮಾಂಡ್ ನಿರ್ಧರಿಸಲಿದ್ದು, ಅವರ ತೀರ್ಮಾನವೇ ಅಂತಿಮ. ಬೇರೆ ಪಕ್ಷಗಳಿಂದ ಹಲವರು ಇನ್ನೂ ಬಿಜೆಪಿಗೆ ಬರುವವರಿದ್ದಾರೆ. ವಿವಿಧ ಜಿಲ್ಲೆಗಳಲ್ಲಿಯೂ ಪಕ್ಷ ಸೇರ್ಪಡೆಗೆ ತುದಿಗಾಲಿನಲ್ಲಿ ನಿಂತಿದ್ದಾರೆ' ಎಂದಿದ್ದಾರೆ.
0 Comments