ಮಂಗಳೂರಿನ ಆಸ್ಪತ್ರೆಯಲ್ಲಿ ಪದ್ಮಶ್ರೀ ಪ್ರಶಸ್ತಿ ವಿಜೇತೆಗೆ ಚಿಕಿತ್ಸೆ.!ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ-ಸಚಿವ ಕೋಟ


ಜಾಹೀರಾತು/Advertisment
ಜಾಹೀರಾತು/Advertisment

 


ಮಂಗಳೂರು: ಪದ್ಮಶ್ರೀ ಪ್ರಶಸ್ತಿ ವಿಜೇತೆ ಸುಕ್ರಿ ಬೊಮ್ಮ ಗೌಡರು ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. 

ಸದ್ಯ ಮಂಗಳೂರಿನ ಪ್ರತಿಷ್ಠಿತ ಕೆ. ಎಂ. ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಕ್ರಿ ಬೊಮ್ಮ ಗೌಡ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ. 

ಈ ಬಗ್ಗೆ ಖುದ್ದು ಮಂಗಳೂರಿನ ಕೆ. ಎಂ. ಸಿ ಆಸ್ಪತ್ರೆಗೆ ಭೇಟಿ ನೀಡಿದ ಕರ್ನಾಟಕ ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ  ಕೋಟ ಶ್ರೀನಿವಾಸ ಪೂಜಾರಿ ಅವರು ಸುಕ್ರಿ ಬೊಮ್ಮ ಗೌಡ ಅವರ  ಬಳಿಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.

ನಂತರ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸುಕ್ರಿ ಬೊಮ್ಮ ಗೌಡ ಅವರ ಆರೋಗ್ಯ ಸ್ಥಿರವಾಗಿದ್ದು ಚೇತರಿಕೆ ಕಂಡು ಬರುತ್ತಿದೆ. ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದರು. 

ಪದ್ಮಶ್ರೀ ಪ್ರಶಸ್ತಿ ವಿಜೇತೆ, ಜನಪದ ಹಾಡುಗಾರ್ತಿ ಹಿರಿಯ ಜೀವ ಸುಕ್ರಿ ಬೊಮ್ಮಗೌಡರವರ ಆರೋಗ್ಯ ಸ್ಥಿರವಾಗಿದ್ದು ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಿರಿಯಜ್ಜಿಯ ಆರೋಗ್ಯ ವಿಚಾರಿಸುತ್ತಾ ಚಿಕಿತ್ಸೆಯ ವೆಚ್ಚವನ್ನು ಸರ್ಕಾರ ಭರಿಸುವುದಾಗಿ ಹೇಳಿಬಂದೆ. ಸುಕ್ರಜ್ಜಿ ಚೇತರಿಸಿಕೊಳ್ಳುತ್ತಿದ್ದಾರೆಂಬುದು ಖುಷಿ ತಂದಿದೆ. ಅವರಿಗೆ ಉತ್ತಮ ಆರೋಗ್ಯದ ಜೊತೆಗೆ ದೀರ್ಘಾಯುಷ್ಯ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥನೆ.

-ಸಚಿವ ಕೋಟ ಶ್ರೀನಿವಾಸ ಪೂಜಾರಿ

Post a Comment

0 Comments