ಶ್ರೀಲಂಕನ್ನರು ಭಾರತಕ್ಕೆ ನುಸುಳುವ ಸಾಧ್ಯತೆ: ಸ್ಥಳಿಯರಿಗೆ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ನಿರೀಕ್ಷಕರ ಸೂಚನೆ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 


ಮಂಗಳೂರು: ಶ್ರೀಲಂಕಾ ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಉಂಟಾಗಿದ್ದು, ಒಂದೊತ್ತಿನ ಊಟಕ್ಕೂ ಜನ ಪರದಾಡುತ್ತಿದ್ದಾರೆ. ದೇಶದಲ್ಲಿ ಅರಾಜಕತೆ ಉಂಟಾಗಿದ್ದು, ಆಹಾರ ಪದಾರ್ಥಗಳಿಗಾಗಿ ದೊಂಬಿ-ಕಲಹ ಹೆಚ್ಚಾಗಿದೆ. ಅಲ್ಲಿನ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟ ಜನ ಸಮುದ್ರ ಮುಖೇನ ಹಾಗೂ ಇನ್ನಿತರ ಮಾರ್ಗಗಳ ಮುಖಾಂತರ ಭಾರತಕ್ಕೆ ಅಕ್ರಮವಾಗಿ ನುಸುಳುವ ಸಾಧ್ಯತೆ ಇದೆ. ಹೀಗಾಗಿ ಕಟ್ಟೆಚ್ಚರ ವಹಿಸುವಂತೆ ಸ್ಥಳೀಯರಿಗೆ ಮಂಗಳೂರಿನ ಕರಾವಳಿ ಕಾವಲು ಪೊಲೀಸ್ ಠಾಣೆ ಪ್ರಕಟಣೆ ಹೊರಡಿಸಿದೆ.

ಅಪರಿಚಿತ ವ್ಯಕ್ತಿಗಳಿಗೆ ಮನೆಯನ್ನು ಬಾಡಿಗೆಗೆ ನೀಡಬೇಡಿ. ಬಾಡಿಗೆ ನೀಡುವಾಗ ಅವರ ಪೂರ್ವಪರವನ್ನು ಸರಿಯಾಗಿ ತಿಳಿದುಕೊಳ್ಳಿ. ಅಲ್ಲದೆ ಸೂಕ್ತ ದಾಖಲಾತಿಗಳನ್ನು ಪಡೆದು ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಕರಾವಳಿ ಕಾವಲು ಪೊಲೀಸ್ ಠಾಣೆಯ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0 Comments

Advertisement