ಬೆಳ್ತಂಗಡಿ: ಎಸ್‌ಡಿಎಂ ಡಿಗ್ರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ಅವರು ಅನಾರೋಗ್ಯದಿಂದ ಭಾನುವಾರ ತಡರಾತ್ರಿ ಸಿಂಗಾಪುರದಲ್ಲಿ ನಿಧನ ನಿಧನರಾಗಿದ್ದಾರೆ.
ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ತೆರಳಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ತಡ ರಾತ್ರಿ ನಿಧನರಾಗಿದ್ದಾರೆ.
ಇವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಪತ್ನಿಯ ಸಹೋದರ. ಸಾಕಷ್ಟು ವರ್ಷಗಳ ಕಾಲ ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು. ಸದಾ ಹಸನ್ಮುಖಿಯಾಗಿದ್ದ ಅವರು, ಸಾವಿರಾರು ವಿದ್ಯಾರ್ಥಿಗಳ ನೆಚ್ಚಿನ ಗುರುಗಳಾಗಿದ್ದರು. ಇದೀಗ ಅವರ ಅಗಲುವಿಕೆಗೆ ಸಾವಿರಾರು ವಿದ್ಯಾರ್ಥಿ ವೃಂದ ಹಾಗೂ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ
0 Comments